ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ: ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಿತಿಮೀರಿದ ವಾಯು ಮಾಲಿನ್ಯದಿಂದಾಗಿ ದೆಹಲಿಯ ಎಲ್ಲಾ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದಹೆಲಿ; ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಿತಿಮೀರಿದ ವಾಯು ಮಾಲಿನ್ಯದಿಂದಾಗಿ ದೆಹಲಿಯ ಎಲ್ಲಾ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ದಟ್ಟ ಹೊಗೆ ಆವರಿಸಿರುವ ಕಾರಣ ದೆಹಲಿಯ ಮೂರು ಮಹಾನಗರ ಪಾಲಿಕೆ ವ್ಯಾಪ್ತಿಯ 1800 ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ದಟ್ಟ ಹೊಗೆ ಮತ್ತು ವಾಯು ಮಾಲಿನ್ಯದ ಕಾರಣದಿಂದಾಗಿ ಶಾಲೆಗಳಿಗೆ ರಜೆ ನೀಡಲಾಗಿದೆ.  ಕಳೆದ 17 ವರ್ಷಗಳಲ್ಲಿ ನಗರದಲ್ಲಿ ಈ ಪ್ರಮಾಣದಲ್ಲಿ ಯಾವತ್ತೂ ಹೊಗೆ ಆವರಿಸಿಕೊಂಡಿರಲಿಲ್ಲ.  
 
ದಕ್ಷಿಣ ದೆಹಲಿ ಮಹಾನಗರ ಪಾಲಿಕೆ,  ಉತ್ತರ ದೆಹಲಿ ಮಹಾನಗರ ಪಾಲಿಕೆ (ಎನ್‌ಡಿಎಂಸಿ) ಮತ್ತು ಪೂರ್ವ ದೆಹಲಿ ಮಹಾನಗರ ಪಾಲಿಕೆಯಡಿ (ಇಡಿಎಂಸಿ) ನಡೆಯುತ್ತಿರುವ ಶಾಲೆಗಳಲ್ಲಿ 9 ಲಕ್ಷ ವಿದ್ಯಾರ್ಥಿಗಳಿದ್ದಾರೆ.
 
ವಾಯು ಮಾಲಿನ್ಯ ಹೆಚ್ಚುತ್ತಿರುವುದರಿಂದ ಮಕ್ಕಳು ಮನೆಯ ಹೊರಗೆ ಬರದಿರಲು ಮತ್ತು ಆರೋಗ್ಯದ ಎಚ್ಚರಿಕೆ ಹೊರಡಿಸುವಂತೆ  ವಿಜ್ಞಾನ ಮತ್ತು ಪರಿಸರ ಕೇಂದ್ರವು ಗುರುವಾರ ದೆಹಲಿ ಸರ್ಕಾರಕ್ಕೆ ಸೂಚನೆ ನೀಡಿತ್ತು.
 
ಇಟ್ಟಿಗೆ ಭಟ್ಟಿಗಳನ್ನು ಮುಚ್ಚುವಂತೆ  ಸೂಚಿಸಬೇಕು ಮತ್ತು ದೆಹಲಿ ಭದ್ರಾಪುರ ಕೈಗಾರಿಕಾ ಘಟಕದಿಂದ ಹಾರುಬೂದಿ ವಾತಾವರಣ ಸೇರುವುದಕ್ಕೆ ತಡೆ ಸೇರಿದಂತೆ ವಾಯ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಬೇಕು ಎಂದು ಪರಿಸರ ಸಚಿವಾಲಯ ದೆಹಲಿ ಸರ್ಕಾರಕ್ಕೆ ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com