ಮತ್ತೊಬ್ಬ ಯೋಧ ಹುತಾತ್ಮ, ಪಾಕ್ ಪುಂಡಾಟಕ್ಕೆ ಭಾರತದಿಂದ ತಕ್ಕ ಪ್ರತ್ಯುತ್ತರ

ಪಾಕಿಸ್ತಾನ ಭಾನುವಾರ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಪಾಕ್ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಮತ್ತೊಬ್ಬ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಶ್ರೀನಗರ: ಪಾಕಿಸ್ತಾನ ಭಾನುವಾರ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಪಾಕ್ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಮತ್ತೊಬ್ಬ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ ಮತ್ತು ಇತರೆ ಇಬ್ಬರು ಗಾಯಗೊಂಡಿದ್ದಾರೆ.
ಪೂಂಚ್ ಜಿಲ್ಲೆಯ ಮೆಂಧಾರ್ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿರುವ ಭಾರತೀಯ ಸೇನೆ ಪಾಕಿಸ್ತಾನದ ಹಲವು ಸೇನಾ ನೆಲೆಗಳನ್ನು ಧ್ವಂಸಗೊಳಿಸಿದೆ.
ಕನಿಷ್ಠ ನಾಲ್ಕು ಸ್ಥಳಗಳಲ್ಲಿ ಪಾಕಿಸ್ತಾನ ಸೇನೆ ಭಾರತೀಯ ಸೇನೆ ಮತ್ತು ನಾಗರಿಕರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸುತ್ತಿದ್ದು, ಶೆಲ್ ದಾಳಿ ಮುಂದುವರೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಬೆಳಗ್ಗಯಷ್ಟೇ ಜಮ್ಮು ಮತ್ತು ಕಾಶ್ಮೀರದ ಆರ್ ಎಸ್ ಪುರ ಸೆಕ್ಟರ್ ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 22 ಸಿಖ್ ರೆಜಿಮೆಂಟ್ ನ ಗುರ್ ಸೇವಕ್ ಸಿಂಗ್ ಅವರು ಹುತಾತ್ಮನಾಗಿರುವ ಯೋಧನಾಗಿದ್ದಾರೆ ಎಂದು ರಕ್ಷಣಾ ಇಲಾಖೆ ಮಾಹಿತಿ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com