ಪಾಕಿಸ್ತಾನ ನಾಗರಿಕರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸುತ್ತಿರುವುದರಲ್ಲಿ ಕನಿಷ್ಟ ನಾಲ್ಕು ಪ್ರದೇಶಗಳಿವೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಪಾಕ್ ಸೇನೆಯ ಅಪ್ರಚೋದಿತ ದಾಳಿಯನ್ನು ಭಾರತೀಯ ಸೇನೆ ಸಮರ್ಥವಾಗಿ ಎದುರಿಸಿದ್ದು, ಶೆಲ್ ಹಾಗೂ ಗುಂಡಿನ ದಾಳಿ ಮೂಲಕ ಪ್ರತ್ಯುತ್ತರ ನೀಡಿದೆ ಎಂದು ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸೆ.28 ರಂದು ಭಾರತೀಯ ಸೇನೆ ಉಗ್ರರ ನೆಲೆಗಳ ಮೇಲೆ ಸೀಮಿತ ದಾಳಿ ನಡೆಸಿದ ಬಳಿಕ ಪಾಕಿಸ್ತಾನದಿಂದ ನಡೆಯುತ್ತಿದ್ದ ಗಡಿನಿಯಂತ್ರಣ ರೇಖೆ ಬಳಿಯ ಕದನ ವಿರಾಮ ಉಲ್ಲಂಘನೆ ಮತ್ತಷ್ಟು ಹೆಚ್ಚಾಗಿದೆ.