ಬೆಳಿಗ್ಗೆ 8:40 ರ ವೇಳೆಗೆ ಪಾಕಿಸ್ತಾನ ದಾಳಿ ನಡೆಸಲು ಪ್ರಾರಂಭಿಸಿದ್ದು, ಕಾಶ್ಮೀರದ ನಾಗರಿಕರನ್ನು ಗುರಿಯಾಗಿರಿಸಿಕೊಂಡು ಶೆಲ್ ದಾಳಿ ನಡೆಸುತ್ತಿದೆ. ಪಾಕ್ ಸೇನೆಯ ಅಪ್ರಚೋದಿತ ದಾಳಿಯನ್ನು ಭಾರತೀಯ ಸೇನೆ ಸಮರ್ಥವಾಗಿ ಎದುರಿಸಿದ್ದು, ಶೆಲ್ ಹಾಗೂ ಗುಂಡಿನ ದಾಳಿ ಮೂಲಕ ಪ್ರತ್ಯುತ್ತರ ನೀಡುತ್ತಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.