

ವಡೋದರ: ಗುಜರಾತ್ ನ ಕರ್ಜಾನ್ ರಾಷ್ಟ್ರೀಯ ಹೆದ್ದಾರಿ 8ರಲ್ಲಿ ಸರಣಿ ಅಪಘಾತ ಸಂಭವಿಸಿದ್ದು ಒಂದೇ ಕುಟುಂಬದ 8 ಮಂದಿ ಸೇರಿ ಒಂಬತ್ತು ಯಾತ್ರಿಕರು ಸಾವನ್ನಪ್ಪಿದ್ದಾರೆ.
ಕಳೆದ ರಾತ್ರಿ ಬಸ್ ಹಿಂದೆ ಚಳಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿದ್ದರಿಂದ ಈ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಒಟ್ಟು ಒಂಬತ್ತು ಮಂದಿ ಸಾವನ್ನಪ್ಪಿದ್ದು, ಮೂವರು ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸರಣಿ ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಂ ಆಗಿತ್ತು. ಸದ್ಯ ಅಪಘಾತದಲ್ಲಿ ಗಾಯಗೊಂಡಿರುವವರನ್ನು ಕರ್ಜಾನ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.