ಎನ್ ಡಿಟಿವಿಗೆ ಒಂದು ದಿನದ ನಿಷೇಧ ಆದೇಶ ತಡೆಹಿಡಿದ ಕೇಂದ್ರ ಸರ್ಕಾರ

ಪ್ರಸಾರ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಹಿಂದಿ ಸುದ್ದಿ ವಾಹಿನಿ ಎನ್ ಡಿಟಿವಿಗೆ ವಿಧಿಸಿದ್ಧ 24 ಗಂಟೆಗಳ ನಿಷೇಧ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಪ್ರಸಾರ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಹಿಂದಿ ಸುದ್ದಿ ವಾಹಿನಿ ಎನ್ ಡಿಟಿವಿಗೆ ವಿಧಿಸಿದ್ಧ 24 ಗಂಟೆಗಳ ನಿಷೇಧ ಆದೇಶವನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸೋಮವಾರ ತಡೆಹಿಡಿದಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಇಂದು ಬೆಳಗ್ಗೆಯಷ್ಟೇ ಪಠಾಣ್ ಕೋಟ್ ದಾಳಿ ಪ್ರಸಾರ ಮಾಡಿದ್ದಕ್ಕೆ ಒಂದು ದಿನದ ನಿಷೇಧ ವಿಧಿಸಿದ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಎನ್ ಡಿಟಿವಿ ಸುಪ್ರೀಕೋರ್ಟ್ ಮೆಟ್ಟಿಲೇರಿತ್ತು. ಇದರ ಬೆನ್ನಲ್ಲೇ ಸರ್ಕಾರ ತನ್ನ ಆದೇಶವನ್ನು ತಡೆಹಿಡಿದಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ನಿಷೇಧ ನಿರ್ಧಾರವನ್ನು ಮಾಧ್ಯಮ ಸಂಸ್ಥೆಗಳು, ಭಾರತೀಯ ಸಂಪಾದಕರ ಸಂಘ ಹಾಗೂ ಪ್ರತಿಪಕ್ಷಗಳು ತೀವ್ರವಾಗಿ ವಿರೋಧಿಸಿದ್ದವು. ಕೇಂದ್ರ ಸರ್ಕಾರ ಮಾಧ್ಯಮ ಮತ್ತು ಭಾರತೀಯ ನಾಗರಿಕರ ಸ್ವಾತಂತ್ರ್ಯವನ್ನು ಉಲ್ಲಂಘಿಸಿದೆ ಹಾಗೂ ಸರ್ಕಾರದ ಈ ನಿರ್ಧಾರ ತುರ್ತು ಪರಿಸ್ಥಿತಿಯನ್ನು ನೆನಪಿಸುವಂತಿದೆ ಎಂದು ಸಂಪಾದಕರ ಸಂಘ ವಾಗ್ದಾಳಿ ನಡೆಸಿತ್ತು.
ಇತ್ತೀಚೆಗೆ ಪಠಾಣ್ ಕೋಟ್ ಉಗ್ರರ ದಾಳಿ ಸಂದರ್ಭದಲ್ಲಿ ಸೂಕ್ಷ್ಮ ವಿಚಾರಗಳನ್ನು ಪ್ರಸಾರ ಮಾಡಿ ಪ್ರಸಾರ ನಿಯಮ ಉಲ್ಲಂಘಿಸಿದ ಆರೋಪದಡಿ ನವೆಂಬರ್ 9ರ ಮಧ್ಯರಾತ್ರಿಯಿಂದ ನವೆಂಬರ್ 10ರ ಮಧ್ಯರಾತ್ರಿ ಒಟ್ಟು 24 ಗಂಟೆ ವರೆಗೆ ಯಾವುದೇ ರೀತಿಯ ಕಾರ್ಯಾಕ್ರಮಗಳು ಹಾಗೂ ಸುದ್ದಿ ಪ್ರಸಾರ ಮಾಡದಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಎನ್ ಡಿಟಿವಿಗೆ ಆದೇಶಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com