ಬೆಂಗಳೂರು: ದೇಶಾದ್ಯಂತ 500 ಹಾಗೂ 1000 ರುಪಾಯಿ ಮುಖಬೆಲೆಯ ನೋಟುಗಳ ಚಲಾವಣೆಗೆ ಬ್ರೇಕ್ ಹಾಕಿರುವ ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ ನಿರ್ಧಾರವನ್ನು ರಾಜ್ಯ ಕಾಂಗ್ರೆಸ್ ನಾಯಕರು ಶ್ಲಾಘಿಸಿದ್ದಾರೆ.
ಸಚಿವ ಕಾಗೋಡು ತಿಮ್ಮಪ್ಪ ಹಾಗೂ ಕಾನೂನು ಸಚಿವ ಟಿಬಿ ಜಯಚಂದ್ರ ಅವರು ಮೋದಿವನ್ನು ಶ್ಲಾಘಿಸಿದ್ದು, ಭ್ರಷ್ಟಾಚಾರ, ಕಪ್ಪುಹಣ ಹಾಗೂ ನಕಲಿ ನೋಟುಗಳ ಹಾವಳಿಯನ್ನು ತಡೆಗಟ್ಟುವಲ್ಲಿ ದಿಟ್ಟ ನಿರ್ಧಾರಗೊಂಡಿದ್ದಾರೆ ಎಂದರು.
500 ಹಾಗೂ 1000 ರುಪಾಯಿ ಮುಖಬೆಲೆಯ ನೋಟುಗಳನ್ನು ಬ್ಯಾನ್ ಮಾಡುವ ಮೂಲಕ ಕೇಂದ್ರ ಸರ್ಕಾರ ದಿಟ್ಟ ನಿರ್ಧಾರಕೈಗೊಂಡಿದೆ. ಭ್ರಷ್ಟಾಚಾರದಿಂದ ಬೇಸತ್ತಿದ್ದು ನಿನ್ನೆ ಇದಕ್ಕೆಲ್ಲಾ ತಿಲಾಂಜಲಿ ಹಾಕಲಾಗಿದೆ. ನಿಜ ಹೇಳಬೇಕೆಂದರೆ ನಿನ್ನೆಯೇ ನಾನು ಕಣ್ತುಂಬ ನಿದ್ದೆ ಮಾಡಿದ್ದಾಗಿ ಹೇಳಿದ್ದಾರೆ.
ದೇಶದ ಪ್ರಗತಿಗಾಗಿ ಕೇಂದ್ರ ಸರ್ಕಾರ ಕಠಿಣ ನಿರ್ಧಾರ ಕೈಗೊಳ್ಳಬೇಕಿತ್ತು. ಅದರಂತೆ ಇದೀಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈ ನಿಟ್ಟಿ ದಿಟ್ಟ ಕೈಗೊಂಡಿರುವುದು ಶ್ಲಾಘನೀಯ. ಈ ನಿರ್ಧಾರದಿದಂ ಜನಸಾಮಾನ್ಯರಿಗೆ ಸಣ್ಣಪುಟ್ಟ ತೊಂದರೆಗಳಾಗುತ್ತದೆ. ಅದಕ್ಕಾಗಿಯೇ ಕೇಂದ್ರ ಸರ್ಕಾರ ಕಾಲವಕಾಶವನ್ನು ನೀಡಿದೆ ಎಂದು ಕಂದಾಯ ಇಲಾಖೆ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.
ನಿನ್ನೆ ತುರ್ತುಸಭೆ ಕರೆದಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ಮಾತನಾಡಿದ್ದರು. ಈ ವೇಳೆ ದೇಶಾದ್ಯಂತ 500-1000 ರುಪಾಯಿ ಮುಖಬೆಲೆಯ ನೋಟುಗಳನ್ನು ನಿಷೇಧಿಸಿರುವ ಘೋಷಣೆ ಮಾಡುತ್ತಿದ್ದರು.