500, 1000 ರುಪಾಯಿ ನೋಟ್ ನಿಷೇಧ ನಿರ್ಧಾರ ಬೆಂಬಲಿಸಿದ ಬಿಹಾರ ಸಿಎಂ

500 ಹಾಗೂ 1000 ರುಪಾಯಿಯ ನೋಟ್ ಗಳನ್ನು ಬ್ಯಾನ್ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ಬಿಹಾರ....
ನಿತಿಶ್ ಕುಮಾರ್
ನಿತಿಶ್ ಕುಮಾರ್
ಪಾಟ್ನಾ: 500 ಹಾಗೂ 1000 ರುಪಾಯಿಯ ನೋಟ್ ಗಳನ್ನು ಬ್ಯಾನ್ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರು, ದೇಶದ ಆರ್ಥಿಕತೆ ಸುಧಾರಣೆಗೆ ಇದು ಸಹಕಾರಿಯಾಗಲಿದೆ ಎಂದಿದ್ದಾರೆ.
ಕೇಂದ್ರ ಸರ್ಕಾರ ನಿನ್ನೆ ಮಧ್ಯರಾತ್ರಿಯಿಂದ 500 ಹಾಗೂ 1000 ರುಪಾಯಿ ನೋಟ್ ಗಳನ್ನು ಹಿಂಪಡೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಬಿಹಾರ ಸಿಎಂ, ಕೇಂದ್ರದ ನಿರ್ಧಾರವನ್ನು ಸ್ವಾಗತಿಸುತ್ತೇನೆ ಮತ್ತು ಬೆಂಬಲಿಸುತ್ತೇನೆ ಎಂದಿದ್ದಾರೆ.
ಕೇಂದ್ರ ಸರ್ಕಾರದ ಈ ದಿಢೀರ್ ನಿರ್ಧಾರದಿಂದ ಆರಂಭದಲ್ಲಿ ಜನರಿಗೆ ಸ್ವಲ್ಪ ತೊಂದರೆಯಾಗುತ್ತದೆ. ಆದರೆ ಮುಂದೆ ಅದು ಸಕಾರಾತ್ಮಕ ಫಲಿತಾಂಶ ನೀಡಲಿದೆ ಎಂದು ನಿತಿಶ್ ಕುಮಾರ್ ಅವರು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಕಪ್ಪು ಹಣ, ಭ್ರಷ್ಟಾಚಾರ ಹಾಗೂ ಭಯೋತ್ಪಾದನೆಗೆ ಕುಮ್ಮಕ್ಕು ನೀಡುವ ನಕಲಿ ನೋಟುಗಳ ಹಾವಳಿ ತಡೆಯುವುದಕ್ಕಾಗಿ ಮಧ್ಯರಾತ್ರಿಯಿಂದಲೇ 500 ಹಾಗೂ 1000 ರುಪಾಯಿ ನೋಟ್ ಗಳಿಗೆ ನಿಷೇಧ ಹೇರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com