
ನವದೆಹಲಿ: ಭಾರತದ ಕಪ್ಪು ಹಣ ವಹಿವಾಟನ್ನು ಅಂತ್ಯಗೊಳಿಸಲು ಪ್ರಧಾನಿ ನರೇಂದ್ರ ಮೋದಿ ತೆಗೆದು ಕೊಂಡಿರುವ ನಿರ್ಧಾರದಿಂದ ಪಾಕಿಸ್ತಾನಕ್ಕೆ ತೀವ್ರ ಆಘಾತ ನೀಡಿದೆ ಎಂದು ಜಮ್ಮು ಮತ್ತು ಕಾಶ್ಮೀರ ಉಪಮುಖ್ಯಮಂತ್ರಿ ನಿರ್ಮಲ್ ಸಿಂಗ್ ಅಭಿಪ್ರಾಯ ಪಟ್ಟಿದ್ದಾರೆ.
500 ಮತ್ತು 1000 ಮುಖಬೆಲೆಯ ನೋಟುಗಳ ನಿಷೇಧ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆ ಮೇಲೆ ಪರಿಣಾಮ ಬೀರಲಿದೆ. ಪಾಕಿಸ್ತಾನ ಲಾಹೋರ್, ಕ್ವೆಟ್ಟಾ, ಹಾಗೂ ಪೇಶಾವರದಲ್ಲಿ ಭಾರತ ದೇಶದ ನಕಲಿ ನೋಟುಗಳನ್ನು ಮುದ್ರಿಸಲಾಗುತ್ತಿದೆ ಎಂದು ಸಿಂಗ್ ಆರೋಪಿಸಿದ್ದಾರೆ.
ಭಾರತದ ನೋಟುಗಳನ್ನೇ ಹೋಲುವ ನಕಲಿ ನೋಟುಗಳನ್ನು ಪಾಕಿಸ್ತಾನ ಮುದ್ರಿಸುತ್ತಿದ್ದುದ್ದೇ ದೇಶದಲ್ಲಿ ಸಮಸ್ಯೆ ತಲೆದೋರಲು ಕಾರಣವಾಯಿತು. ಅಲ್ಲಿ ಮುದ್ರಿಸಿದ ನೋಟುಗಳನ್ನು ತಂದು ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆ ನಡೆಸಲಾಗುತ್ತಿದೆ ಎಂದು ಅವರು ದೂರಿದ್ದಾರೆ.
ರಾಷ್ಟ್ರೀಯ ಭದ್ರತೆಗಾಗಿ ಪ್ರಧಾನಿ ನರೇಂದ್ರ ಮೋದಿ ಈ ಒಳ್ಳೆಯ ನಿರ್ಧಾರ ಕೈಗೊಂಡಿದ್ದಾರೆ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
Advertisement