ಕಾಶ್ಮೀರ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರ ಹತ್ಯೆ

ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೊರೆ ಪ್ರದೇಶದಲ್ಲಿ ರಕ್ಷಣಾ ಸಿಬ್ಬಂದಿ ಇಬ್ಬರು ಅಪರಿಚಿತ ಉಗ್ರರನ್ನು ಎನ್ ಕೌಂಟರ್...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೊರೆ ಪ್ರದೇಶದಲ್ಲಿ ರಕ್ಷಣಾ ಸಿಬ್ಬಂದಿ ಇಬ್ಬರು ಅಪರಿಚಿತ ಉಗ್ರರನ್ನು ಎನ್ ಕೌಂಟರ್ ಮಾಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಶ್ರೀನಗರದಿಂದ 60 ಕಿ.ಮೀ ದೂರದಲ್ಲಿರುವ ದಂಗಿವಾಚ ಸಮೀಪ ದುರ್ಸೂ ಗ್ರಾಮದಲ್ಲಿ ರಕ್ಷಣಾ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಇಬ್ಬರು ವಿದೇಶಿ ಉಗ್ರರನ್ನು ಹತ್ಯೆ ಮಾಡಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಈ ಪ್ರದೇಶದಲ್ಲಿ ಕೆಲವು ಉಗ್ರರು ಅವಿತುಕೊಂಡಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ರಕ್ಷಣಾ ಪಡೆ ಶೋಧ ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ ಸೇನೆ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ ಉಗ್ರರು ಹೊಡೆದುರುಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ
ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಉಗ್ರರು ಯಾವ ಸಂಘಟನೆಗೆ ಸೇರಿದವರು ಮತ್ತು ಯಾವ ದೇಶದ ನಾಗರಿಕರು ಎಂಬುದರ ಬಗ್ಗೆ ಇನ್ನಷ್ಟೇ ಮಾಹಿತಿ ಬರಬೇಕಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com