ಸಾಂದರ್ಭಿಕ ಚಿತ್ರ
ದೇಶ
ಕಾಶ್ಮೀರದ ಬರಮುಲ್ಲಾ ಜಿಲ್ಲೆಯಲ್ಲಿ ಭಾರತೀಯ ಸೇನೆ ಕಾರ್ಯಾಚರಣೆ: ಉಗ್ರಗಾಮಿ ಹತ್ಯೆ
ಜಮ್ಮು-ಕಾಶ್ಮೀರದ ಬರಮುಲ್ಲಾ ಜಿಲ್ಲೆಯ ರಾಂಪುರ ವಲಯದಲ್ಲಿ ಭಾರತೀಯ ಸೇನೆ...
ಶ್ರೀನಗರ: ಜಮ್ಮು-ಕಾಶ್ಮೀರದ ಬರಮುಲ್ಲಾ ಜಿಲ್ಲೆಯ ರಾಂಪುರ ವಲಯದಲ್ಲಿ ಭಾರತೀಯ ಸೇನೆ ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ನಾಶಪಡಿಸಿ ಓರ್ವ ಉಗ್ರನನ್ನು ಕೊಂದುಹಾಕಿದ್ದಾರೆ.
ಸ್ಥಳದಿಂದ ಎಕೆ-47 ರೈಫಲ್ ನ್ನು ವಶಪಡಿಸಿಕೊಳ್ಳಲಾಗಿದ್ದು ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ನಿನ್ನೆ ಪಾಕಿಸ್ತಾನ ಸೇನೆ ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚ್ಚಲ್ ವಲಯದಲ್ಲಿ ನಡೆಸಿದ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಯೋಧ ಹತರಾಗಿದ್ದರು. ಅದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಇಂದು ಭಾರೀ ಶಸ್ತ್ರಾಸ್ತ್ರಗಳೊಂದಿಗೆ ಗಡಿ ಭಾಗದಲ್ಲಿ ಪಾಕಿಸ್ತಾನಕ್ಕೆ ಸೇರಿದ ಅನೇಕ ಸೇನಾ ಕೇಂದ್ರಗಳ ಮೇಲೆ ದಾಳಿ ನಡೆಸಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ