ಕಣ್ಣೂರ್: ಕೇಂದ್ರ ಸರ್ಕಾರ 500 ಹಾಗೂ 1000 ರುಪಾಯಿ ನೋಟ್ ನಿಷೇಧಿಸಿದ ನಂತರ ದೇಶದ ವಿವಿಧ ನಗರಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸುತ್ತಿದ್ದು, ಶುಕ್ರವಾರ ಕಣ್ಣೂರ್ ನ ಕಂಪನಿಯೊಂದರ ಮೇಲೆ ದಾಳಿ ನಡೆಸಿ, 18 ಲಕ್ಷ ರುಪಾಯಿ ನಗದು ಜಪ್ತಿ ಮಾಡಿದ್ದಾರೆ.
ದಾಳಿ ಕುರಿತು ಎಕ್ಸ್ ಪ್ರೆಸ್ ನೊಂದಿಗೆ ಮತಾನಾಡಿದ ಆದಾಯ ತೆರಿಗೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು, ದಾಳಿಯ ವೇಳೆ ನಿಷೇಧಿತ 500 ಹಾಗೂ 1000 ರುಪಾಯಿ ಮುಖಬೆಲೆಯ 18 ಲಕ್ಷ ರುಪಾಯಿ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕಂಪನಿಯ ಅಧಿಕಾರಿಗಳ ಬಳಿ ಜಪ್ತಿಯಾದ ಹಣ ಯಾವ ಮೂಲದಿಂದ ಬಂತು ಎಂಬುದರ ಬಗ್ಗೆ ಯಾವುದೇ ದಾಖಲೆ ಇಲ್ಲ. ದಾಳಿ ಮತ್ತು ತನಿಖೆಯ ನಂತರ ಇಲಾಖೆ ಎಲ್ಲಾ ವಿವರ ನೀಡಲಿದೆ ಎಂದು ಅವರು ಹೇಳಿದ್ದಾರೆ.
ನಿನ್ನೆಯಷ್ಟೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು, ದೆಹಲಿ, ಮುಂಬೈ ಸೇರಿದಂತೆ ಹಲವು ಕಡೆ ದಾಳಿ ನಡೆಸಿತ್ತು.