ಕೃಷ್ಣಮೃಗ ಬೇಟೆ ಪ್ರಕರಣ: ನಟ ಸಲ್ಮಾನ್ ಖಾನ್'ಗೆ ಮತ್ತೆ ಸಂಕಷ್ಟ

ಕೃಷ್ಣಮೃಗ ಬೇಟಿ ಪ್ರಕರಣ ಸಂಬಂಧ ಮತ್ತೆ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಸಂಕಷ್ಟ ಎದುರಾಗಿದ್ದು, ರಾಜಸ್ತಾನ ಸರ್ಕಾರ ಸಲ್ಲಿಸಿದ್ದ ಮನವಿಗೆ ಒಪ್ಪಿಗೆ ಸೂಚಿಸಿರುವ ಸುಪ್ರೀಂಕೋರ್ಟ್ ಸಲ್ಮಾನ್ ವಿರುದ್ಧ ಶುಕ್ರವಾರ ನೋಟಿಸ್...
ಬಾಲಿವುಡ್ ನಟ ಸಲ್ಮಾನ್ ಖಾನ್ (ಸಂಗ್ರಹ ಚಿತ್ರ)
ಬಾಲಿವುಡ್ ನಟ ಸಲ್ಮಾನ್ ಖಾನ್ (ಸಂಗ್ರಹ ಚಿತ್ರ)

ನವದೆಹಲಿ: ಕೃಷ್ಣಮೃಗ ಬೇಟಿ ಪ್ರಕರಣ ಸಂಬಂಧ ಮತ್ತೆ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಸಂಕಷ್ಟ ಎದುರಾಗಿದ್ದು, ರಾಜಸ್ತಾನ ಸರ್ಕಾರ ಸಲ್ಲಿಸಿದ್ದ ಮನವಿಗೆ ಒಪ್ಪಿಗೆ ಸೂಚಿಸಿರುವ ಸುಪ್ರೀಂಕೋರ್ಟ್ ಸಲ್ಮಾನ್ ವಿರುದ್ಧ ಶುಕ್ರವಾರ ನೋಟಿಸ್ ವೊಂದನ್ನು ಜಾರಿ ಮಾಡಿದೆ.

ಕೃಷ್ಣಮೃಗ ಬೇಟೆ ಪ್ರಕರಣ ಸಂಬಂಧ ಸಲ್ಲಿಸಲಾಗಿದ್ದ ಅರ್ಜಿಯನ್ನು ತುರ್ತು ಪರಿಶೀಲನೆ ನಡೆಸುವಂತೆ ರಾಜಸ್ತಾನ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಬಳಿ ಮನವಿ ಮಾಡಿಕೊಂಡಿತ್ತು. ಈ ಮನವಿಗೆ ಇಂದು ಒಪ್ಪಿಗೆ ಸೂಚಿಸಿರುವ ಸುಪ್ರೀಂಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ನಟ ಸಲ್ಮಾನ್ ಖಾನ್ ಅವರಿಗೆ ನೋಟಿಸ್ ಜಾರಿಗೆ ಮಾಡಿದೆ ಎಂದು ತಿಳಿದುಬಂದಿದೆ.

ಪ್ರಕರಣ ಸಂಬಂಧ ಜು.25 ರಂದು ವಿಚಾರಣೆ ನಡೆಸಿದ್ದ ರಾಜಸ್ತಾನ ಹೈಕೋರ್ಟ್ ಸೂಕ್ತ ಸಾಕ್ಷ್ಯಾಧಾರಗಳಿಲ್ಲ ಎಂದು ಹೇಳಿ ಖುಲಾಸೆಗೊಳಿಸಿ ತೀರ್ಪು ನೀಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ರಾಜಸ್ತಾನ ಸರ್ಕಾರ ಸುಪ್ರೀಂಕೋರ್ಟ್ ಮೊರೆಹೋಗಿತ್ತು.

1998ರಲ್ಲಿ ಹಮ್ ಸಾಥ್ ಸಾಥ್ ಹೇ ಚಿತ್ರದ ಚಿತ್ರೀಕರಣ ಸಮಯದಲ್ಲಿ ಜೋಧ್ಪುರದ ಬಳಿಯಿರುವ ಕಂಕಣಿ ಗ್ರಾಮದಲ್ಲಿ ನಟ ಸಲ್ಮಾನ್ ಖಾನ್ ಅವರು ಕೃಷ್ಣಮೃಗ ಬೇಟೆಯಾಡಿದ್ದರು ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸಲ್ಮಾನ್ ವಿರುದ್ಧ ವನ್ಯಜೀವಿ ರಕ್ಷಮಾ ಕಾಯ್ದೆಯಡಿಯಲ್ಲಿ 2 ಪ್ರತ್ಯೇಕ ಪ್ರಕರಣಗಳು ದಾಖಲಾಗಿತ್ತು.

1998ರ ಸೆಪ್ಟಂಬರ್ 26 ಹಾಗೂ 27 ರಂದು ಭಾವಾಡದಲ್ಲಿ ಕೃಷ್ಣಮೃಗ ಕೊಂದಿದ್ದ ಪ್ರಕರಣ ಹಾಗೂ 1998ರ ಸೆಪ್ಟೆಂಬರ್ 28 ಮತ್ತು 29ರಂದು ಮಥಾನಿಯಾದಲ್ಲಿ ಚಿಂಕಾರ ಕೊಂದ ಪ್ರಕರಗಳು ದಾಖಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com