

ನವದೆಹಲಿ: ಕೇಂದ್ರ ಸರ್ಕಾರ 500, 1000 ರೂ ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸಿರುವ ಕ್ರಮದ ಬಗ್ಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗಂಭೀರ ಆರೋಪ ಮಾಡಿದ್ದಾರೆ. ನೋಟುಗಳನ್ನು ರದ್ದುಗೊಳಿಸಿರುವುದರ ಹಿಂದೆ ದೊಡ್ದ ಹಗರಣವಿದೆ ಎಂದು ದೆಹಲಿ ಸಿಎಂ ಆರೋಪಿಸಿದ್ದು, ನೋಟು ರದ್ದತಿ ನಿರ್ಧಾರ ಜಾರಿಗೊಳ್ಳುವ ಮುನ್ನವೇ ಪ್ರಧಾನಿ ನರೇಂದ್ರ ಮೋದಿ ತಮಗೆ ಬೇಕಾದವರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು ಎಂದು ಆರೋಪಿಸಿದ್ದಾರೆ.