ಇಸ್ರೇಲ್ ಅಧ್ಯಕ್ಷರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ
ದೇಶ
ಭಯೋತ್ಪಾದನೆ ವಿರುದ್ಧದ ಹೋರಾಡಲು ಜಾಗತಿಕ ಸಮುದಾಯಕ್ಕೆ ಪ್ರಧಾನಿ ಮೋದಿ ಕರೆ
ಭಯೋತ್ಪಾದನೆಯನ್ನು ಬೆಂಬಲಿಸಿ ಪೋಷಿಸುತ್ತಿರುವ ಪಾಕಿಸ್ತಾನದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದು, ಭಯೋತ್ಪಾದನೆ ವಿರುದ್ಧ ಹೋರಾಡಲು ಜಾಗತಿಕ ಸಮುದಾಯಕ್ಕೆ ಕರೆ ನೀಡಿದ್ದಾರೆ.
ನವದೆಹಲಿ: ಭಯೋತ್ಪಾದನೆಯನ್ನು ಬೆಂಬಲಿಸಿ ಪೋಷಿಸುತ್ತಿರುವ ಪಾಕಿಸ್ತಾನದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದು, ಭಯೋತ್ಪಾದನೆ ವಿರುದ್ಧ ಹೋರಾಡಲು ಜಾಗತಿಕ ಸಮುದಾಯಕ್ಕೆ ಕರೆ ನೀಡಿದ್ದಾರೆ.
ಭಾರತ ಪ್ರವಾಸ ಕೈಗೊಂಡಿರುವ ಇಸ್ರೇಲ್ ಅಧ್ಯಕ್ಷರನ್ನು ಸ್ವಾಗತಿಸಿ ಮಾತನಾಡಿದ ಪ್ರಧಾನಿ ಮೋದಿ, ಜಾಗತಿಕ ಸಮುದಾಯ ಭಯೋತ್ಪಾದನೆ ವಿರುದ್ಧ ಹೋರಾಡುವ, ಭಯೋತ್ಪಾದಕ ನೆಲೆಗಳನ್ನು ಧ್ವಂಸಗೊಳಿಸುವ ತುರ್ತು ಅಗತ್ಯವನ್ನು ಇಸ್ರೇಲ್- ಭಾರತ ಒಪ್ಪಿಕೊಂಡಿದೆ.
ನಮ್ಮ ದೇಶದ ಜನತೆ ನಿರಂತರವಾಗಿ ಭಯೋತ್ಪಾದನೆ, ತೀವ್ರಗಾಮಿತ್ವವನ್ನು ಎದುರಿಸುತ್ತಿದ್ದಾರೆ. ಭಯೋತ್ಪಾದನೆಯನ್ನು ಜಾಗತಿಕ ಸವಾಲು ಎಂದು ನಾವು ಗುರುತಿಸಿದ್ದೇವೆ, ಭಯೋತ್ಪಾದನೆಗೆ ಗಡಿ ರೇಖೆಗಳು ಇಲ್ಲ. ಅಂತೆಯೇ ವಿವಿಧ ರೀತಿಯ ಪಾತಕ ಕೃತ್ಯಗಳೊಂದಿಗೆ ನಂಟು ಹೊಂದಿದ್ದು ಅದನ್ನು ಬೆಳೆಸಿರುವ ಪೋಷಿಸುತ್ತಿರುವ ರಾಷ್ಟ್ರಗಳ ಪೈಕಿ ಭಾರತದ ನೆರೆರಾಷ್ಟ್ರವೂ ಸೇರಿದೆ ಎಂದು ಪ್ರಧಾನಿ ಮೋದಿ ಪಾಕ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇದೇ ವೇಳೆ ಇಸ್ರೇಲ್- ಭಾರತದ ರಕ್ಷಣಾ ಪಾಲುದಾರಿಕೆಯ ಬಗ್ಗೆಯೂ ಪ್ರಧಾನಿ ನರೇಂದ್ರ ಮೋದಿ ಮಾತನಾದಿದ್ದು, ಉತ್ಪಾದನಾ ವಲಯದಲ್ಲಿ ಹೆಚ್ಚು ಪಾಲುದಾರಿಕೆ ಹೊಂದಲು ಉಭಯ ರಾಷ್ಟ್ರಗಳೂ ಒಪ್ಪಿಗೆ ಸೂಚಿಸಿವೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ದ್ವಿಪಕ್ಷೀಯ ಮಾತುಕತೆ ವೇಳೆ ವಿಶ್ವಸಂಸ್ಥೆಯ ಭದ್ರತಾಮಂಡಳಿಯಲ್ಲಿ ಭಾರತದ ಕಾಯಂ ಸದಸ್ಯತ್ವಕ್ಕೆ ಬೆಂಬಲ ಘೋಷಿಸಿರುವುದಕ್ಕೆ ಇಸ್ರೇಲ್ ಗೆ ಪ್ರಧಾನಿ ಧನ್ಯವಾದ ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ