

ನವದೆಹಲಿ: ನಾಳೆಯಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭಗೊಳ್ಳಲಿದೆ, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ದೆಹಲಿಯ 10. ಜನಪಥ್ ನಲ್ಲಿ ಸಭೆ ನಡೆಯಿತು.
ನಾಳೆಯಿಂದ ಆರಂಭವಾಗುವ ಅಧಿವೇಶನದಲ್ಲಿ ಮುಖ್ಯವಾಗಿ 500 ಹಾಗೂ1.000 ರೂ ನೋಟು ನಿಷೇಧ ಸಂಬಂಧ ಚರ್ಚೆ ನಡೆಸಲು ಕಾಂಗ್ರೆಸ್ ನಾಯಕರು ಸಿದ್ಧತೆ ನಡೆಸಿದ್ದಾರೆ.
ಜೊತೆಗೆ ಎನ್ ಡಿಎ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಜಿಎಸ್ ಟಿ ವಿರುದ್ಧ ಹರಿಹಾಯಲು ಕಾಂಗ್ರೆಸ್ ಪೂರ್ವ ತಯಾರಿ ಮಾಡಿಕೊಳ್ಳುತ್ತಿದೆ.
ಅನಾರೋಗ್ಯದ ಕಾರಣ ನವೆಂಬರ್ 7 ರಂದು ನಡದ ಕಾಂಗ್ರೆಸ್ ಕಾರ್ಯಕಾರಿಣಿಗೆ ಗೈರಾಗಿದ್ದ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಪಾಲ್ಗೋಂಡಿದ್ದರು.