ಪ್ರಧಾನಿ ವಿರುದ್ಧ ಅವಹೇಳನಕಾರಿ ಮಾತು: ಅಮರ್ ಸಿಂಗ್ ವಿರುದ್ಧ ಎಫ್ಐಆರ್

ನೋಟು ನಿಷೇಧ ಸಂಬಂಧ ಪ್ರದಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷದ ಸಂಸದ ಅಮರ್ ...
ಅಮರ್ ಸಿಂಗ್
ಅಮರ್ ಸಿಂಗ್

ಅಜಮ್ ಘರ್: ನೋಟು ನಿಷೇಧ ಸಂಬಂಧ  ಪ್ರದಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷದ ಸಂಸದ ಅಮರ್ ಸಿಂಗ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಐಪಿಸಿ ಸೆಕ್ಷನ್ 66ರ ಅಡಿಯಲ್ಲಿ ನಗರದ ಕೊಟ್ವಾಲಿ ಠಾಣೆಯಲ್ಲಿ ದೂರು ದಾಖಲಾಗಿದೆ. ಸಂವಹನ ಮಾಧ್ಯಮದ ಮೂಲಕ ಪ್ರಧಾನಿ ವಿರುದ್ಧ ಅವಹೇಳನಕಾರಿ ಸಂದೇಶ ರವಾನಿಸಿದ್ದಾರೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ.

ಅಪರಿಚಿತ ವ್ಯಕ್ತಿಯೊಬ್ಬ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುತ್ತಿರುವುದನ್ನು ಅಮರ್ ಸಿಂಗ್ ನೋಡಿ ನಗುತ್ತಿರುವ ವಿಡಿಯೋ ವೈರಲ್ ಆಗಿದ್ದು, ಅದರ ಆಧಾರದ ಮೇಲೆ ದೂರು ದಾಖಲಿಸಿರುವುದಾಗಿ ಬಿಜೆಪಿ ವಕ್ತಾರ ಪಿ ಸಿಂಗ್ ಹೇಳಿದ್ದಾರೆ.

ಇನ್ನು ಈ ಸಂಬಂಧ ಸ್ಪಷ್ಟನೆ ನೀಡಿರುವ ಅಮರ್ ಸಿಂಗ್ ನವೆಂಬರ್ 8 ರಂದು ನಾನು ನವದೆಹಲಿಯ ಚಾಣಕ್ಯಪುರಿ ಪೊಲೀಸ್ ಠಾಣೆಯ ಪಕ್ಕದ ಹೊಟೇಲ್ ನ ಮುಂಭಾಗ ವಾಹನಕ್ಕಾಗಿ ಕಾಯುತ್ತಿದ್ದೆ. ಈ ವೇಳೆ ಬಂದ ಅಪರಿಚಿತ ವ್ಯಕ್ತಿಯೊಬ್ಬ ನನ್ನೊಡನೆ ಸೆಲ್ಫೀ ತೆಗೆದುಕೊಂಡ, ಜೊತೆಗೆ ಪ್ರಧಾನಿ ವಿರುದ್ಧ ಅವಹೇಳನಕಾರಿ ಹೇಳಿಯಾಗಿ ಮಾತನಾಡಿದ. ಮರುದಿನ ಬೆಳಗ್ಗೆ ವಿಡಿಯೋ ವೈರಲ್ ಆಗಿದೆ ಎಂದು ಅಮರ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ತಾವು ಕೂಡ ಎಫ್ ಐಆರ್ ದಾಖಲಿಸಿರುವುದಾಗಿ ಅಮರ್ ಸಿಂಗ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com