

ನವದೆಹಲಿ: ತಾವು ಕಿಡ್ನಿ ವೈಫಲ್ಯದಿಂದ ಆಸ್ಪತ್ರೆ ಸೇರಿದ್ದು, ಪ್ರಸ್ತುತ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಬುಧವಾರ ಹೇಳಿದ್ದಾರೆ.
ಟ್ವಿಟರ್ ನಲ್ಲಿ ಈ ಬಗ್ಗೆ ಹೇಳಿಕೆ ನೀಡಿರುವ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು, ಶೀಘ್ರದಲ್ಲೇ ತಾವು ಕಿಡ್ನಿ ಟ್ರಾನ್ಸ್ ಪ್ಲಾಂಟೇಷನ್ ಶಸ್ತ್ರಚಿಕಿತ್ಸೆ ಒಳಗಾಗುತ್ತಿದ್ದೇನೆ. ಶ್ರೀಕೃಷ್ಣ ಭಗವಂತ ಆಶೀರ್ವಾದ ಮಾಡುತ್ತೇನೆ ಎಂದು ಆಶಿಸುತ್ತೇನೆ ಎಂದು ಹೇಳಿದ್ದಾರೆ.