ನೋಟು ನಿಷೇಧ: ಪ್ರಧಾನಿ ಮೋದಿ ಬೆನ್ನಿಗೆ ನಿಂತ ನಿತೀಶ್ ಕುಮಾರ್

ದುಬಾರಿ ನೋಟಿನ ಮೇಲೆ ನಿಷೇಧ ಹೇರಿರುವುದಕ್ಕೆ ಒಂದೆಡೆ ವಿರೋಧ ಪಕ್ಷಗಳು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರೆ, ಮತ್ತೊಂದೆಡೆ ಬಿಹಾರ ರಾಜ್ಯ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು...
ಬಿಹಾರ ರಾಜ್ಯ ಮುಖ್ಯಮಂತ್ರಿ ನಿತೀಶ್ ಕುಮಾರ್
ಬಿಹಾರ ರಾಜ್ಯ ಮುಖ್ಯಮಂತ್ರಿ ನಿತೀಶ್ ಕುಮಾರ್

ಮಧುಬಾನಿ: ದುಬಾರಿ ನೋಟಿನ ಮೇಲೆ ನಿಷೇಧ ಹೇರಿರುವುದಕ್ಕೆ ಒಂದೆಡೆ ವಿರೋಧ ಪಕ್ಷಗಳು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರೆ, ಮತ್ತೊಂದೆಡೆ ಬಿಹಾರ ರಾಜ್ಯ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮೋದಿಯವರ ಬೆಂಬಲಕ್ಕೆ ಬಂದಿದ್ದಾರೆ.

ಚೇತನ್ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ರು.500 ಹಾಗೂ 1,000 ಮುಖಬೆಲೆ ದುಬಾರಿ ನೋಟಿನ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿದೆ. ಕೇಂದ್ರ ಸರ್ಕಾರದ ಈ ನಿರ್ಧಾರದ ಪರವಾಗಿ ನಾನು ನಿಲ್ಲುತ್ತೇನೆ. ಅಕ್ರಮವಾಗಿ ಸಂಪಾದನೆ ಮಾಡಿರುವ ಬೇನಾಮಿ ಆಸ್ತಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಕಪ್ಪುಹಣದ ವಿರುದ್ಧ ಹೋರಾಟ ಮಾಡಬೇಕಿದ್ದರೆ, ಮೊದಲೂ ಅಕ್ರಮವಾಗಿ ಸಂಪಾದನೆ ಮಾಡಿದ ಬೇನಾಮಿ ಆಸ್ತಿಗಳ ವಿರುದ್ಧ ಕ್ರಮಕೈಗೊಳ್ಳಬೇಕಿದೆ. ಹೀಗಾಗಿ ಬೇನಾಮಿ ಆಸ್ತಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದಿದ್ದಾರೆ.

ಇದೇ ವೇಳೆ ಕೇಂದ್ರ ಸರ್ಕಾರ ವಿರುದ್ಧ ಕಿಡಿಕಾಡಿರುವ ಅವರು, ಪೂರ್ವಸಿದ್ಧತೆಗಳಿಲ್ಲೆದೆಯೇ ಕೇಂದ್ರ ಸರ್ಕಾರ ಕ್ರಮಕೈಗೊಂಡಿದ್ದು, ಸರ್ಕಾರದ ಈ ನಿರ್ಧಾರಕ್ಕೆ ಸಾಮಾನ್ಯ ಜನರು ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com