ಕೇಂದ್ರ ಸರ್ಕಾರದ ಹೊಸ ಯೋಜನೆ: ಪೆಟ್ರೋಲ್ ಬಂಕ್ ಗಳಲ್ಲೂ ಹಣ ಪಡೆಯುವ ಅವಕಾಶ!

ರು.500 ಹಾಗೂ 1,000 ನೋಟಿನ ಮೇಲೆ ನಿಷೇಧ ಹೇರಿದ ನಂತರ ಬ್ಯಾಂಕ್ ಗಳು ಹಾಗೂ ಎಟಿಎಂಗಳ ಬಳಿ ಕ್ಯೂನಲ್ಲಿ ನಿಂತು ಸಮಸ್ಯೆ ಎದುರಿಸುತ್ತಿರುವ ಜನತೆಗೆ ಅನುಕೂಲ ಮಾಡಿಕೊಡಲು...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ರು.500 ಹಾಗೂ 1,000 ನೋಟಿನ ಮೇಲೆ ನಿಷೇಧ ಹೇರಿದ ನಂತರ ಬ್ಯಾಂಕ್ ಗಳು ಹಾಗೂ ಎಟಿಎಂಗಳ ಬಳಿ ಕ್ಯೂನಲ್ಲಿ ನಿಂತು ಸಮಸ್ಯೆ ಎದುರಿಸುತ್ತಿರುವ ಜನತೆಗೆ ಅನುಕೂಲ ಮಾಡಿಕೊಡಲು ಕೇಂದ್ರ ಸರ್ಕಾರ ಮುಂದಾಗಿದ್ದು, ಹೊಸ ಯೋಜನೆಯನ್ನು ಹಾಕಿಕೊಂಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶೀಘ್ರಗತಿಯಲ್ಲಿ ಪರಿಹಾರ ಕಂಡುಹಿಡಯಲು ಕೇಂದ್ರ ಸರ್ಕಾರ ಮುಂದಾಗಿದ್ದು, ಸುಮಾರು 2,500 ಪೆಟ್ರೋಲ್ ಬಂಕ್ ಗಳಲ್ಲಿ ನಗದು ಹಣ ವಿತರಿಸಲು ಮುಂದಾಗಿದೆ.

ಇನ್ನು ಮುಂದೆ ಜನರು ತಮ್ಮ ಬಳಿ ಇರುವ ಡೆಬಿಡ್ ಕಾರ್ಡ್ ಅಥವಾ ಕ್ರೆಡಿರ್ಟ್ ಕಾರ್ಡ್ ಗಳನ್ನು ಸ್ವೈಪ್ ಮಾಡಿ ಹಣವನ್ನು ಪಡೆಯಬಹುದಾಗಿದೆ. ದೇಶದಲ್ಲಿ ಆಯ್ದ ಪೆಟ್ರೋಲ್ ಬಂಕ್ ಗಳಲ್ಲಿ ಜನರು ದಿನಕ್ಕೆ ರು.2000 ಹಣವನ್ನು ವಿತ್ ಡ್ರಾ ಮಾಡುವ ಅವಕಾಶ ಕಲ್ಪಿಸಲು ಯೋಜನೆ ರೂಪಿಸಿದೆ ಎಂದು ಹೇಳಲಾಗುತ್ತಿದೆ.

ಈ ಕುರಿತಂತೆ ಕೇಂದ್ರ ಸರ್ಕಾರದ ಸ್ವಾಮ್ಯದಲ್ಲಿರುವ ದೂರದರ್ಶನ ಟ್ವೀಟರ್ ನಲ್ಲಿ ಹೇಳಿಕೊಂಡಿದ್ದು. ಜನರ ಸಮಸ್ಯೆ ದೂರಾಗಿಸಲು ಕೇಂದ್ರ ಸರ್ಕಾರ ಹೊಸ ಯೋಜನೆಯನ್ನು ಜಾರಿಗೆ ತರಲಿದ್ದು, ಇನ್ನು ಮುಂದೆ ಜನರು ಆಯ್ದ ಪೆಟ್ರೋಲ್ ಬಂಕ್ ಗಳಲ್ಲಿ ದಿನಕ್ಕೆ ರು.2000 ಹಣವನ್ನು ತಮ್ಮ ಡೆಬಿಟ್ ಕಾರ್ಡ್ ಹಾಗೂ ಕ್ರೆಡಿಟ್ ಕಾರ್ಡ್ ಗಳ ಮುಖಾಂತರ ವಿತ್ ಡ್ರಾ ಮಾಡಬಹುದಾಗಿದೆ ಎಂದು ಹೇಳಿಕೊಂಡಿದೆ.

ದೇಶದ ಸುಮಾರು 2,500 ಪೆಟ್ರೋಲ್ ಬಂಕ್ ಗಳಲ್ಲಿ ಕೆಲವೇ ದಿನಗಳಲ್ಲಿ ಈ ಯೋಜನೆ ಜಾರಿಗೆ ಬರದಿದ್ದು, ಮುಂದಿನ ದಿನಗಳಲ್ಲಿ ಸುಮಾರು 20,000 ಪೆಟ್ರೋಲ್ ಬಂಕ್ ಗಳಲ್ಲಿ ಈ ಯೋಜನೆಯನ್ನು ವಿಸ್ತರಿಸುವ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com