

ನವದೆಹಲಿ: ಪಶ್ಚಿಮ ದೆಹಲಿಯ ಮುಂಡ್ಕ ಪ್ರದೇಶದಲ್ಲಿರುವ ಪ್ಲಾಸ್ಟಿಕ್ ತ್ಯಾಜ್ಯ ಮಾರುಕಟ್ಟೆಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ ಎಂದು ಶುಕ್ರವಾರ ತಿಳಿದುಬಂದಿದೆ.
ಇಂದು ಬೆಳಗಿನ ಜಾವ ಬೆಂಕಿ ಅವಘಡ ಸಂಭವಿಸಿದ್ದು, ಮಾರುಕಟ್ಟೆಯ ಸುತ್ತಲೂ ದಟ್ಟ ಹೊಗೆ ಆವರಿಸಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ 33 ಅಗ್ನಿ ಶಾಮಕದಳದ ವಾಹನಗಳೊಂದಿಗೆ ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.
ಘಟನೆಗೆ ಈ ವರೆಗೂ ಕಾರಣಗಳು ತಿಳಿದುಬಂದಿಲ್ಲ. ಯಾವುದೇ ರೀತಿಯ ಸಾವು, ನೋವುಗಳ ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ.
ಮೂಲಗಳ ಪ್ರಕಾರ ಈಗಾಗಲೇ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ತಿಳಿದುಬಂದಿದೆ.