ಅಹಮ್ಮದನಗರ: 500 ಹಾಗೂ 1000 ನೋಟ್ ನಿಷೇಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಅವರು ಇದೊಂದು ಕ್ರಾಂತಿಕಾರಿ ನಡೆ ಎಂದು ಶುಕ್ರವಾರ ಹೇಳಿದ್ದಾರೆ.
ಈ ಕ್ರಾಂತಿಕಾರಿ ನಡೆ ಕಪ್ಪು ಹಣ, ಭ್ರಷ್ಟಾಚಾರ ಮತ್ತು ಭಯೋತ್ಪದಾನೆಯನ್ನು ತಡೆಯಲಿದೆ ಎಂದು ಹಜಾರೆ ಅವರು ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಈ ಹಿಂದಿನ ಸರ್ಕಾರ ಕಪ್ಪು ಹಣವನ್ನು ನಿಯಂತ್ರಿಸಲು ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಕಠಿಣ ಕ್ರಮ ತೆಗೆದುಕೊಂಡಿದ್ದು, ಇದರಿಂದ ಪ್ರಜಾಪ್ರಭುತ್ವ ಮತ್ತಷ್ಟು ಬಲಗೊಳ್ಳಲಿದೆ ಎಂದಿದ್ದಾರೆ.
ಇದೇ ವೇಳೆ ರಾಜಕೀಯ ಪಕ್ಷಗಳ ಹರಿದು ಬರುವ ದೇಣಿಗೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಹಿರಿಯ ಹೋರಾಟಗಾರ, ಕೇಂದ್ರ ಸರ್ಕಾರ ಈಗ ಚುನಾವಣಾ ಪ್ರಕ್ರಿಯೆಯನ್ನು ಸ್ವಚ್ಛಗೊಳಿಸಬೇಕು ಎಂದು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.