ಚುನಾವಣೆಗೆ ವೇಳಾಪಟ್ಟಿ ಘೋಷಣೆಯಾಗುತ್ತಿದ್ದಂತೆ ಪ್ರಿಯಾಂಕ ಗಾಂಧಿ ಅವರ ಪ್ರಚಾರ ಕಾರ್ಯಕ್ರಮದ ಬಗ್ಗೆ ಮತ್ತಷ್ಟು ಸ್ಪಷ್ಟನೆ ನೀಡುವುದಾಗಿ ರಾಜ್ ಬಬ್ಬರ್ ಹೇಳಿದ್ದಾರೆ. ಪ್ರಿಯಾಂಕಾ ಗಾಂಧಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವಿಕೆ ಪಕ್ಷ ಹಾಗೂ ರಾಜ್ಯದ ಜನತೆಯಲ್ಲಿ ವಿಶ್ವಾಸ ಮೂಡಿಸುತ್ತದೆ ಅವರಿಗೆ ಹೆಚ್ಚಿನ ಸಮಯ ಸಿಕ್ಕಲ್ಲಿ ರಾಜ್ಯದ ಎಲ್ಲಾ 403 ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರಚಾರ ಮಾಡುತ್ತಾರೆ ಎಂದು ರಾಜ್ ಬಬ್ಬರ್ ಈ ಹಿಂದೆ ಹೇಳಿಕೆ ನೀಡಿದ್ದರು.