ಪಾಕಿಸ್ತಾನದಿಂದ ಗಡಿಯಲ್ಲಿ ಮತ್ತೆ ಅಪ್ರಚೋದಿತ ಶೆಲ್ ದಾಳಿ
ದೇಶ
ಪಾಕಿಸ್ತಾನದಿಂದ ಗಡಿಯಲ್ಲಿ ಮತ್ತೆ ಅಪ್ರಚೋದಿತ ಶೆಲ್ ದಾಳಿ
ಗಡಿಯಲ್ಲಿ ಮತ್ತೆ ಪಾಕಿಸ್ತಾನ ಅಪ್ರಚೋದಿತ ದಾಳಿ ಪ್ರಾರಂಭಿಸಿದ್ದು, ಗಡಿ ನಿಯಂತ್ರಣ ರೇಖೆಯಲ್ಲಿ ಶೆಲ್ ದಾಳಿ ನಡೆಸಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ಜಮ್ಮು: ಗಡಿಯಲ್ಲಿ ಮತ್ತೆ ಪಾಕಿಸ್ತಾನ ಅಪ್ರಚೋದಿತ ದಾಳಿ ಪ್ರಾರಂಭಿಸಿದ್ದು, ಗಡಿ ನಿಯಂತ್ರಣ ರೇಖೆಯಲ್ಲಿ ಶೆಲ್ ದಾಳಿ ನಡೆಸಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ನ.19 ರಂದು ಬೆಳಿಗ್ಗೆ ನೌಶೇರಾ ಸೆಕ್ಟರ್ ನಲ್ಲಿ 10:30 ರಿಂದ ಪಾಕಿಸ್ತಾನ ಶೆಲ್ ದಾಳಿ ನಡೆಸಲು ಪ್ರಾರಂಭಿಸಿದ್ದು ಈ ವರೆಗೂ 120 ಮೋಟರ್ ಶೆಲ್ ಗಳನ್ನು ದಾಳಿಗೆ ಬಳಕೆ ಮಾಡಿವೆ ಎಂದು ರಕ್ಷಣಾ ಇಲಾಖೆ ವಕ್ತಾರ ಮನೀಷ್ ಮೆಹ್ತಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಪಾಕ್ ಭಯೋತ್ಪಾದಕರ ವಿರುದ್ಧ ಸೀಮಿತ ದಾಳಿ ನಡೆಸಿದ ನಂತರ ಗಡಿ ಪ್ರದೇಶದಲ್ಲಿ ಪಾಕ್ ಸೇನೆಯ ಅಪ್ರಚೋದಿತ ದಾಳಿ ಮತ್ತಷ್ಟು ಹೆಚ್ಚಾಗಿದೆ.