ಉ.ಪ್ರದೇಶ ಚುನಾವಣೆ ಪ್ರಚಾರಕ್ಕೆ ಪ್ರಿಯಾಂಕ, ವರದಿ ಸ್ವಾಗತಿಸಿದ ಕಾಂಗ್ರೆಸ್

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪುತ್ರಿ ಪ್ರಿಯಾಂಕ ಗಾಂಧಿ ಅವರು ಉತ್ತರ ಪ್ರದೇಶ ಚುನಾವಣೆಯಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ....
ಪ್ರಿಯಾಂಕ ಗಾಂಧಿ
ಪ್ರಿಯಾಂಕ ಗಾಂಧಿ
Updated on
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪುತ್ರಿ ಪ್ರಿಯಾಂಕ ಗಾಂಧಿ ಅವರು ಉತ್ತರ ಪ್ರದೇಶ ಚುನಾವಣೆಯಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ ಎಂಬ ವರದಿಗಳನ್ನು ಶನಿವಾರ ಪಕ್ಷ ಸ್ವಾಗತಿಸಿದೆ.
ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರು, ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಪ್ರಿಯಾಂಕ ಗಾಂಧಿ ಅವರು ಭಾಗವಹಿಸಿದರೆ ಕಾರ್ಯಕರ್ತರಿಗೆ ಖುಷಿಪಡುತ್ತಾರೆ ಎಂದಿದ್ದಾರೆ.
ಮತ್ತೊಬ್ಬ ಕಾಂಗ್ರೆಸ್ ನಾಯಕ ಮಣಿ ಶಂಕರ್ ಅಯ್ಯರ್ ಅವರು ಸಹ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವುದು ಬಿಡುವುದು ಪ್ರಿಯಾಂಕ ಅವರಿಗೆ ಬಿಟ್ಟ ವಿಚಾರ. ಆದರೆ ಕಾಂಗ್ರೆಸ್ ಪಕ್ಷ ಅವರ ನಿರೀಕ್ಷೆಯಲ್ಲಿದೆ ಎಂದಿದ್ದಾರೆ.
ಪ್ರಿಯಾಂಕ ಗಾಂಧಿ ವಾದ್ರಾ ಅವರು ಡೈನಾಮಿಕ್ ವ್ಯಕ್ತಿತ್ವ ಹೊಂದಿದ್ದು, ಮುಂದಿನ ವರ್ಷ ನಡೆಯುವ ಚುನಾವಣೆಯಲ್ಲಿ ಅವರು ಪಕ್ಷದ ಪರ ಪ್ರಚಾರ ಮಾಡಲಿದ್ದಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರಾಜ್ ಬಬ್ಬರ್ ಅವರು ನಿನ್ನೆಯಷ್ಟೇ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com