ಉಲ್ಫಾ ಉಗ್ರರ ದಾಳಿ: ಅಸ್ಸಾಂ ಸಿಎಂ ಜೊತೆ ಗೃಹ ಸಚಿವ ರಾಜನಾಥ್ ಸಿಂಗ್ ಮಾತು

ಅಸ್ಸಾಂನ ತಿನ್ಸುಕಿಯಾ ನಲ್ಲಿ ಶಂಕಿತ ಉಲ್ಫಾ ಉಗ್ರರು ಭಾರತೀಯ ಸೇನಾ ವಾಹನದ ಮೇಲೆ ಐಇಡಿ ಬಾಂಬ್ ದಾಳಿ ನಡೆಸಿದ ಘಟನೆ ಬಗ್ಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅಸ್ಸಾಂ ಸಿಎಂ ಸರ್ಬಾನಂದ್ ಸೋನೊವಾಲ್ ಅವರೊಂದಿಗೆ ಮಾತನಾಡಿ ಮಾಹಿತಿ ಪಡೆದಿದ್ದಾರೆ.
ರಾಜನಾಥ್ ಸಿಂಗ್
ರಾಜನಾಥ್ ಸಿಂಗ್
ನವದೆಹಲಿ: ಅಸ್ಸಾಂನ ತಿನ್ಸುಕಿಯಾ ನಲ್ಲಿ ಶಂಕಿತ ಉಲ್ಫಾ ಉಗ್ರರು ಭಾರತೀಯ ಸೇನಾ ವಾಹನದ ಮೇಲೆ ಐಇಡಿ ಬಾಂಬ್ ದಾಳಿ ನಡೆಸಿದ ಘಟನೆ ಬಗ್ಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅಸ್ಸಾಂ ಸಿಎಂ ಸರ್ಬಾನಂದ್ ಸೋನೊವಾಲ್ ಅವರೊಂದಿಗೆ ಮಾತನಾಡಿ ಮಾಹಿತಿ ಪಡೆದಿದ್ದಾರೆ. 
ಸರ್ಬಾನಂದ ಸೋನೋವಾಲ್ ಅವರೊಂದಿಗೆ ಮಾಹಿತಿ ಪಡೆದ ಬಳಿಕ ಉಗ್ರರ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ರಾಜನಾಥ್ ಸಿಂಗ್, ಗೃಹ ಇಲಾಖೆ (ಎಂಹೆಚ್ಎ) ಪರಿಸ್ಥಿತಿಯ ಬಗ್ಗೆ ನಿಗಾ ವಹಿಸಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ. ಅಸ್ಸಾಂನ ತಿನ್ಸುಕಿಯಾ ನಲ್ಲಿ ಸಂಭವಿಸಿದ ಬಾಂಬ್ ದಾಳಿಯಲ್ಲಿ ಯೋಧರು ಮೃತಪಟ್ಟಿರುವುದು ನೋವುಂಟು ಮಾಡಿದೆ. ಬಾಂಬ್ ಸ್ಫೋಟದಲ್ಲಿ ಗಾಯಗೊಂಡ ಯೋಧರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ. ಉಗ್ರರ ಹಾಗೂ ಭಾರತೀಯ ಸೇನೆ ನಡುವೆ ಗುಂಡಿನ ಚಕಮಕಿ ಮುಂದುವರೆದಿದ್ದು, ಬಾಂಬ್ ದಾಳಿಯಲ್ಲಿ ಗಾಯಗೊಂಡಿರುವ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com