ಹಳಿ ತಪ್ಪಿದ ಗೂಡ್ಸ್ ರೈಲು: ಹಲವೆಡೆ ಸಂಚಾರ ಸ್ಥಗಿತ

ಬಿಲಾಸ್ಪುರದಿಂದ ರಾಯ್ಪುರಕ್ಕೆ ತೆರಳುತ್ತಿದ್ದ ಗೂಡ್ಸ್ ರೈಲೊಂದು ಹಳಿತಪ್ಪಿದ್ದು, ಪರಿಣಾಮ ಹೌರಾ-ಮುಂಬೈ ಮಾರ್ಗದಲ್ಲಿ ಸಂಚಾರ ಸ್ಥಗಿತಗೊಂಡಿರುವುದಾಗಿ ಭಾನುವಾರ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಬಿಲಾಸ್ಪುರದಿಂದ ರಾಯ್ಪುರಕ್ಕೆ ತೆರಳುತ್ತಿದ್ದ ಗೂಡ್ಸ್ ರೈಲೊಂದು ಹಳಿತಪ್ಪಿದ್ದು, ಪರಿಣಾಮ ಹೌರಾ-ಮುಂಬೈ ಮಾರ್ಗದಲ್ಲಿ ಸಂಚಾರ ಸ್ಥಗಿತಗೊಂಡಿರುವುದಾಗಿ ಭಾನುವಾರ ತಿಳಿದುಬಂದಿದೆ.

14 ಬೋಗಿಗಳನ್ನೊಳಗೊಂಡ ಕಾರ್ಗೋ ರೈಲೊಂದು ಕೆಲ ವಸ್ತುಗಳನ್ನು ಹೊತ್ತು ಬಿಲಾಸ್ಪುರದಿಂದ ರಾಯ್ಪುರಕ್ಕೆ ತೆರಳುತ್ತಿತ್ತು. ಸಿಲ್ಯಾರಿ ಮತ್ತು ಮಂಧರ್ ರೈಲ್ವೆ ನಿಲ್ಧಾಣಕ್ಕೆ ಬರಲು 22 ಕಿ.ಮೀ ಇರುವಾಗ ರೈಲು ಹಳಿ ತಪ್ಪಿದೆ ಎಂದು ತಿಳಿದುಬಂದಿದೆ.

ರೈಲು ಹಳಿ ತಪ್ಪಿದ ಪರಿಣಾಮ ಹೌರಾ-ಮುಂಬೈ ಮಾರ್ಗಗಳ ಸಂಚಾರ ಸ್ಥಗಿತಗೊಳ್ಳುವಂತೆ ಮಾಡಿದ್ದು, ಈ ಹಿನ್ನೆಲೆಯಲ್ಲಿ 12ಕ್ಕೂ ಹೆಚ್ಚು ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ಶೀಘ್ರದಲ್ಲೇ ಸಂಚಾರವನ್ನು ಸರಿಪಡಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com