ಪ್ರಧಾನ ಮಂತ್ರಿ ಗ್ರಾಮೀಣ ಆವಾಸ್ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಆವಾಸ್ ಯೋಜನೆ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಗ್ರಾಮೀಣ ಆವಾಸ್ ಯೋಜನೆ...
ಪ್ರಧಾನ ಮಂತ್ರಿ ಗ್ರಾಮೀಣ ಆವಾಸ್ ಯೋಜನೆ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದ ಪ್ರಧಾನಿ ನರೇಂದ್ರ ಮೋದಿ
ಪ್ರಧಾನ ಮಂತ್ರಿ ಗ್ರಾಮೀಣ ಆವಾಸ್ ಯೋಜನೆ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದ ಪ್ರಧಾನಿ ನರೇಂದ್ರ ಮೋದಿ
ಆಗ್ರಾ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ಆಗ್ರಾದಲ್ಲಿ ಪ್ರಧಾನ ಮಂತ್ರಿ ಗ್ರಾಮೀಣ ಆವಾಸ್ ಯೋಜನೆಯನ್ನು ಉದ್ಘಾಟಿಸಿದರು. ಮುಂದಿನ ಉತ್ತರ ಪ್ರದೇಶದ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಆ ರಾಜ್ಯದಲ್ಲಿಯೇ ಯೋಜನೆಯನ್ನು ಪ್ರಧಾನ ಮಂತ್ರಿಗಳು ಆ ರಾಜ್ಯದಲ್ಲಿಯೇ ಚಾಲನೆ ನೀಡಿದ್ದಾರೆ ಎನ್ನಬಹುದು.
ಕೇಂದ್ರ ಸರ್ಕಾರ ಆರಂಭಿಸಿರುವ ವಸತಿ ಯೋಜನೆಯೇ ಪ್ರಧಾನ ಮಂತ್ರಿ ಗ್ರಾಮೀಣ ಆವಾಸ್ ಯೋಜನೆಯಾಗಿದ್ದು, ಗ್ರಾಮೀಣ ಪ್ರದೇಶದ ಬಡತನ ರೇಖೆಗಿಂತ ಕೆಳಗಿರುವ ಜನರಿಗೆ 2022ರೊಳಗೆ ವಸತಿ ಕಲ್ಪಿಸಿಕೊಡುವ ಯೋಜನೆ ಇದಾಗಿದೆ. 
ಈ ಯೋಜನೆಯಡಿ ಫಲಾನುಭವಿಗಳಿಗೆ ಮನೆ ನಿರ್ಮಾಣಕ್ಕೆಂದು 1.5 ಲಕ್ಷ ರೂಪಾಯಿಗಳನ್ನು ಕೇಂದ್ರ ಸರ್ಕಾರ ನೀಡುತ್ತದೆ. 2022ರೊಳಗೆ ಬಡತನ ರೇಖೆಗಿಂತ ಕೆಳಗಿರುವವರಿಗೆ ಮನೆಗಳನ್ನು ನಿರ್ಮಿಸಿಕೊಡುವುದಲ್ಲದೆ ಗ್ರಾಮೀಣ ಪ್ರದೇಶದ 1 ಕೋಟಿ ಜನರಿಗೆ ಮುಂದಿನ ಮೂರು ವರ್ಷಗಳಲ್ಲಿ ಮನೆ ನಿರ್ಮಿಸಿ ಕೊಡುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ.
ಇದಲ್ಲದೆ ಪ್ರಧಾನಿಗಳು, ಯೋಜನೆಯ 50 ಫಲಾನುಭವಿಗಳಿಗೆ ಹಕ್ಕುಪತ್ರವನ್ನು ವಿತರಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com