ಚಳಿಗಾಲ ಅಧಿವೇಶನ: ಮೋದಿ ಆಗಮಿಸುವಂತೆ ಉಭಯ ಸದನದಲ್ಲಿ ಪ್ರತಿಪಕ್ಷಗಳ ಪಟ್ಟು

ದುಬಾರಿ ನೋಟುಗಳ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿರುವ ಹಿನ್ನೆಲೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಹೋರಾಟ ನಡೆಸಲು ವಿರೋಧ ಪಕ್ಷಗಳು ಕೈಜೋಡಿಸಿದ್ದು, ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ನಡೆಯುತ್ತಿರುವ ಕಲಾಪದಲ್ಲಿ ತೀವ್ರ ಗದ್ದಲವನ್ನುಂಟು...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ದುಬಾರಿ ನೋಟುಗಳ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿರುವ ಹಿನ್ನೆಲೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಹೋರಾಟ ನಡೆಸಲು ವಿರೋಧ ಪಕ್ಷಗಳು ಕೈಜೋಡಿಸಿದ್ದು, ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ನಡೆಯುತ್ತಿರುವ ಕಲಾಪದಲ್ಲಿ ತೀವ್ರ ಗದ್ದಲವನ್ನುಂಟು ಮಾಡುತ್ತಿವೆ.

ರು.500 ಹಾಗೂ 1,000 ನೋಟುಗಳ ಮೇಲೆ ನಿಷೇಧ ಹೇರಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರತಿಕ್ರಿಯೆ ನೀಡಬೇಕಿದ್ದು, ಕೂಡಲೇ ಕಲಾಪಕ್ಕೆ ಹಾಜರಾಗುವಂತೆ ಉಭಯ ಸದನಗಳಲ್ಲಿ ಪ್ರತಿಪಕ್ಷಗಳ ನಾಯಕರು ಪಟ್ಟು ಹಿಡಿದು, ಸದನದ ಬಾವಿಗಿಳಿದು ಪ್ರತಿಭಟನೆಗಳನ್ನು ನಡೆಸುತ್ತಿವೆ.

ಲೋಕಸಭೆಯಲ್ಲಿ ಕಾಂಗ್ರೆಸ್ ಹಾಗೂ ಇನ್ನಿತರೆ ವಿರೋಧ ಪಕ್ಷಗಳು ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನೋಟು ನಿಷೇಧ ನಿರ್ಧಾರವನ್ನು ನಿಯಮ 56ರ ಅಡಿಯಲ್ಲಿ ಚರ್ಚೆ ನಡೆಸಬೇಕೆಂದು ಆಗ್ರಹಿಸುತ್ತಿವೆ.

ಮತ್ತೊಂದೆಡೆ ರಾಜ್ಯಸಭೆಯಲ್ಲೂ ನೋಟು ನಿಷೇಧವನ್ನು ಉರಿ ಉಗ್ರ ದಾಳಿಗೆ ಹೋಲಿಕೆ ಮಾಡಿದ್ದ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಅವರ ವಿರುದ್ಧ ವಿರೋಧಗಳು ವ್ಯಕ್ತವಾಗುತ್ತಿದ್ದು, ಕಲಾಪಕ್ಕೆ ಗದ್ದಲವನ್ನುಂಟು ಮಾಡುತ್ತಿವೆ.

ಸುಗಮ ಕಲಾಪಕ್ಕೆ ವಿರೋಧ ಪಕ್ಷಗಳ ಅಡ್ಡಿ: ಹಿರಿಯ ಸಚಿವರನ್ನು ಭೇಟಿಯಾದ ಮೋದಿ

ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ನಡೆಯುತ್ತಿರುವ ಕಲಾಪದಲ್ಲಿ ವಿರೋಧ ಪಕ್ಷಗಳು ತೀವ್ರ ಗದ್ದಲವನ್ನುಂಟು ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಿರಿಯ ಸಚಿವರೊಂದಿಗೆ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.

ವಿರೋಧಪಕ್ಷಗಳಿಗೆ ತಿರುಗೇಟು ನೀಡಲು ಪ್ರಧಾನಿ ಮೋದಿಯವರು ಹಿರಿಯ ಸಚಿವರೊಂದಿಗೆ ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ.

ಪ್ರಧಾನಿ ಮೋದಿಯವರು ಹಿರಿಯ ಸಚಿವರೊಂದಿಗೆ ಮಾತುಕತೆ ನಡೆಸುತ್ತಿರುವ ಬೆನ್ನಲ್ಲೇ ರಾಜ್ಯಸಭಾ ಸದಸ್ಯರು ಬಿಜೆಪಿಗೆ ವಿಪ್ ಜಾರಿ ಮಾಡಿದ್ದು, ಸದನದ ಕಲಾಪಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಾಜರಾಗುವಂತೆ ತಿಳಿಸಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com