ಸಂಗ್ರಹ ಚಿತ್ರ
ದೇಶ
ಛತ್ತೀಸ್ಗಢದಲ್ಲಿ ಐಇಡಿ ಸ್ಫೋಟ: 2 ಸಿಆರ್'ಪಿಎಫ್ ಯೋಧರಿಗೆ ಗಾಯ
ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದು, ಐಇಡಿ ಸ್ಫೋಟಕ್ಕೆ ಇಬ್ಬರು ಸಿಆರ್'ಪಿಎಫ್ ಯೋಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ...
ರಾಯ್ಪುರ: ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದು, ಐಇಡಿ ಸ್ಫೋಟಕ್ಕೆ ಇಬ್ಬರು ಸಿಆರ್'ಪಿಎಫ್ ಯೋಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.
ಇಂದು ಬೆಳಿಗ್ಗೆ ಸಿಆರ್'ಪಿಎಫ್'ನ 74 ಬೆಟಾಲಿಯನ್ ತಂಡ ಚಿಂತಾನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಸಂಚಾರ ಮುಕ್ತಗೊಳಿಸುವ ಕಾರ್ಯದಲ್ಲಿ ತೊಡಗಿಕೊಂಡಿತ್ತು. ಈ ವೇಳೆ ನಕ್ಸಲರು ಐಇಡಿ ಸ್ಫೋಟಗೊಳಿಸಿದ್ದಾರೆಂದು ತಿಳಿದುಬಂದಿದೆ.
ಪರ್ವಿಂದರ್ ಹಾಗೂ ಪಿ. ಸಾಗರ್ ಗಾಯಗೊಂಡ ಸಿಆರ್ ಪಿಎಫ್ ಯೋಧರೆಂದು ಹೇಳಲಾಗುತ್ತಿದೆ. ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ