ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳವಾರ ಸಂಸತ್ ಕಲಾಪ ಆರಂಭಕ್ಕೂ ಮುನ್ನ ತಮ್ಮ ಪಕ್ಷದ ಸಂಸದರನ್ನು ಭೇಟಿ ಮಾಡಿ ಭಾವನಾತ್ಮಕವಾಗಿ ಮಾತನಾಡಿದ್ದಾರೆ. 500 ಮತ್ತು 1000 ಮುಖಬೆಲೆಯ ನೋಟುಗಳ ಹಿಂತೆಗೆತದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ತಿಂಗಳ ಆರಂಭದಲ್ಲಿ ತಾವು ತೆಗೆದುಕೊಂಡ ಆಘಾತಕಾರಿ ನಿರ್ಧಾರ ದೇಶದ ಬಡಜನರಿಗೆ ಸಹಾಯ ಮಾಡುವ ಉದ್ದೇಶದಿಂದಾಗಿತ್ತು. ಕಪ್ಪು ಹಣ, ಭ್ರಷ್ಟಾಚಾರ ಮತ್ತು ಅಕ್ರಮವಾಗಿ ಹಣದ ಸಾಗಾಟವನ್ನು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಕಠಿಣ ನಿರ್ಧಾರ ತೆಗೆದುಕೊಂಡಿತು ಎಂದು ಹೇಳಿದ್ದಾರೆ.