ಭೋಪಾಲ್: ದೀರ್ಘಾವಧಿ ಅನಾರೋಗ್ಯದಿಂದ ಬಳಲುತ್ತಿದ್ದ ಮಧ್ಯಪ್ರದೇಶದ ಮಾಜಿ ರಾಜ್ಯಪಾಲ ರಾಮ್ ನರೇಶ್ ಯಾದವ್ ಅವರು ನಿಧನರಾಗಿದ್ದಾರೆ.
90 ವರ್ಷ ವಯಸ್ಸಿನ ರಾಮ್ ನರೇಶ್ ಯಾದವ್ ಅವರು ಲಖನೌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ರಾಮ್ ನರೇಶ್ ಯಾದವ್ ಅವರ ನಿಧನಕ್ಕೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಸಾರ್ವಜನಿಕ ಸಂಬಂಧಗಳು ಮತ್ತು ಜಲ ಸಂಪನ್ಮೂಲ ಸಚಿವ ನರೋತ್ತಮ್ ಮಿಶ್ರಾ ವಿಶಾದ ವ್ಯಕ್ತಪಡಿಸಿದ್ದಾರೆ.
ರಾಮ್ ನರೇಶ್ ಅವರು 2011ರ ಆಗಸ್ಟ್ 26ರಿಂದ 2016ರ ಸೆಪ್ಟೆಂಬರ್ 7ರವರೆಗೂ ಮಧ್ಯಪ್ರದೇಶದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಇನ್ನು 1977-79ರವರೆಗೂ ಕಾಂಗ್ರೆಸ್ ಪಕ್ಷದಿಂದ ರಾಮ್ ನರೇಶ್ ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.