ಮಾನನಷ್ಟ ಮೊಕದ್ದಮೆ: ಮತ್ತೆ ಸಂಕಷ್ಟದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್!

ಮಹತ್ವದ ಬೆಳವಣಿಗೆಯೊಂದರಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಮೊಕದ್ದಮೆಯನ್ನು ವಜಾಗೊಳಿಸುವಂತೆ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಜೇಟ್ಲಿ (ಸಂಗ್ರಹ ಚಿತ್ರ)
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಜೇಟ್ಲಿ (ಸಂಗ್ರಹ ಚಿತ್ರ)
Updated on: 

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಮೊಕದ್ದಮೆಯನ್ನು ವಜಾಗೊಳಿಸುವಂತೆ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಆ ಮೂಲಕ ಕೇಜ್ರಿವಾಲ್ ವಿರುದ್ಧ ಪ್ರಕರಣ ಜೀವಂತವಾಗಿದ್ದು, ವಿಚಾರಣೆ ಮುಂದುವರೆಯಲಿದೆ ಎಂದು ನ್ಯಾಯಾಲಯ ಸ್ಪಷ್ಟ ಸಂದೇಶ ನೀಡಿದೆ.

ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ತಮ್ಮ ವಿರುದ್ಧ ಕೇಜ್ರಿವಾಲ್ ಮಾಡಿದ್ದ ಭ್ರಷ್ಟಾಚಾರ ಆರೋಪ ಸಂಬಂಧ ಪಟಿಯಾಲ ಕೋರ್ಟ್ ನಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದನ್ನು ಕೇಜ್ರಿವಾಲ್ ದೆಹಲಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್ ಅಕ್ಟೋಬರ್ 19ರಂದು ದೂರು ವಜಾಗೊಳಿಸುವಂತೆ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ಅಲ್ಲದೆ ಕೇಜ್ರಿವಾಲ್ ವಿರುದ್ಧದ ದೂರು ಯಾವುದೇ ಪೂರ್ವಾಗ್ರಹ ಪೀಡಿತವಲ್ಲ ಎಂದು ಅಭಿಪ್ರಾಯಪಟ್ಟಿತ್ತು. ಕ್ರಿಮಿನಲ್ ಮತ್ತು ನಾಗರಿಕ ಮಾನನಷ್ಟ ಮೊಕದ್ದಮೆಗಳ ಮಧ್ಯೆ ಸಾಕಷ್ಟು ವ್ಯತ್ಯಾಸಗಳಿದ್ದು, ಕೇಜ್ರಿವಾಲ್ ಅವರ ಅರ್ಜಿ ಅರ್ಹತೆ ರಹಿತವಾದದ್ದು ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿತ್ತು.

ಬಳಿಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೇಜ್ರಿವಾಲ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇಂದು ಆ ಆರ್ಜಿಯ ತೀರ್ಪು ನೀಡಿದ ಸುಪ್ರೀಂ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಅಂತೆಯೇ ದೆಹಲಿ ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದಿದೆ.

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಹಾಗೂ ಎಎಪಿ ಐವರು ಮುಖಂಡರು ತಮ್ಮ ವಿರುದ್ಧ ಸುಳ್ಳು ಮತ್ತು ಮಾನಹಾನಿಕರ ಆರೋಪ ಮಾಡಿದ್ದಾರೆ ಎಂದು ಅರುಣ್ ಜೇಟ್ಲಿ ಅವರು ಮೊಕದ್ದಮೆ ದಾಖಲಿಸಿದ್ದರು. ಕೇಜ್ರಿವಾಲ್ ಸೇರಿದಂತೆ ಕುಮಾರ್ ವಿಶ್ವಾಸ್, ಸಂತೋಷ್ ಸಿಂಗ್, ರಾಘವ ಛಡ್ಡಾ ಮತ್ತು ದೀಪಕ್ ವಾಜಪೇಯಿ ವಿರುದ್ಧ ದೂರು ದಾಖಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com