ಕಾನ್ಪುರ ರೈಲು ದುರಂತ: ಸಾವಿನ ಸಂಖ್ಯೆ 148ಕ್ಕೆ ಏರಿಕೆ

ಉತ್ತರ ಪ್ರದೇಶದ ಕಾನ್ಪುರ ಬಳಿ ಫುಖರಾಯ ರೈಲ್ವೇ ನಿಲ್ದಾಣದಲ್ಲಿ ಬಳಿ ಭಾನುವಾರ ಸಂಭವಿಸಿದ ಭೀಕರ ರೈಲು ದುರಂತದಲ್ಲಿ....
ಹಳಿ ತಪ್ಪಿದ ರೈಲು
ಹಳಿ ತಪ್ಪಿದ ರೈಲು
ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರ ಬಳಿ ಫುಖರಾಯ ರೈಲ್ವೇ ನಿಲ್ದಾಣದಲ್ಲಿ ಬಳಿ ಭಾನುವಾರ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ ಮಂಗಳವಾರ 148ಕ್ಕೆ ಏರಿಕೆಯಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ಮೂವರು ಪ್ರಯಾಣಿಕರು ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 148ಕ್ಕೆ ಏರಿಕೆಯಾಗಿದೆ. ಆದರೆ ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಕಾನ್ಪುರ ಐಜಿ ಝಕಿ ಅಹ್ಮದ್ ಅವರು ತಿಳಿಸಿದ್ದಾರೆ. ಅಲ್ಲದೆ ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದ್ದಾರೆ.
ಈ ಮಧ್ಯೆ ಅಪಘಾತ ನಡೆದ ಸ್ಥಳದಲ್ಲಿ ಹಳಿ ಸರಿಪಡಿಸುವ ಕಾರ್ಯ ಮುಕ್ತಾಯವಾಗಿದ್ದು, ಝಾನ್ಸಿ-ಕಾನ್ಪುರ ಮಧ್ಯ ರೈಲು ಸೇವೆಯನ್ನು ಆರಂಭಿಸಲಾಗಿದೆ ಎಂದು ರೇಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಭಾನುವಾರ ಇಂದೋರ್-ಪಾಟ್ನಾ ಎಕ್ಸ್ ಪ್ರೆಸ್ ರೈಲು ಸಂಖ್ಯೆ 19321ರ ಹಳಿತಪ್ಪಿದ ಪರಿಣಾಮ 142 ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದರು ಮತ್ತು 169ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com