ಪಾಟ್ನಾ: ಸಿಆರ್ಪಿಎಫ್ ಮತ್ತು ಜಾರ್ಖಂಡ್ ಪೊಲೀಸರ ಜಂಟಿ ಕಾರ್ಯಾಚರಣೆ ವೇಳೆ 6 ನಕ್ಸಲರನ್ನು ಹತ್ಯೆ ಮಾಡಲಾಗಿದೆ.
ಚಿಪ್ಪದೊಹಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯಪ್ರದೇಶದಲ್ಲಿ ನಕ್ಸಲ್ ವಿರುದ್ಧ ಕಾರ್ಯಾಚರಣೆ ವೇಲೆ ಆರು ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ಸಿಆರ್ಪಿಎಫ್ ಅಧಿಕಾರಿ ಸಂಜಯ್ ಲತ್ಕರ್ ಸ್ಪಷ್ಟಪಡಿಸಿದ್ದಾರೆ.
ಆರು ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದ್ದು ಇನ್ನಷ್ಟೇ ಗುರುತು ಪತ್ತೆ ಹಚ್ಚಬೇಕಿದೆ. ಘಟನಾ ಸ್ಥಳದಲ್ಲಿ ಇನ್ಸಾಸ್ ರೈಫಲ್, ಎಸ್ಎಲ್ಆರ್ ಹಾಗೂ ಹಲವು ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು ಸಂಜಯ್ ಹೇಳಿದ್ದಾರೆ.