ದೆಹಲಿ ಮಾರುಕಟ್ಟೆಯಲ್ಲಿ ಭಾರೀ ಅಗ್ನಿ ಅವಘಡ

ರಾಜಧಾನಿ ದೆಹಲಿಯ ಸದರ್ ಬಜಾರ್ ಮಾರುಕಟ್ಟೆಯಲ್ಲಿ ಬುಧವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ರಾಜಧಾನಿ ದೆಹಲಿಯ ಸದರ್ ಬಜಾರ್ ಮಾರುಕಟ್ಟೆಯಲ್ಲಿ ಬುಧವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ.

ಇಂದು ಬೆಳಗಿನ ಜಾವ ಬೆಂಕಿ ಅವಘಡ ಸಂಭವಿಸಿರುವುದಾಗಿ ಹೇಳಲಾಗುತ್ತಿದ್ದು, ಸುದ್ದಿ ತಿಳಿಯುತ್ತಿದ್ದಂತೆ 10 ಅಗ್ನಿಶಾಮಕ ದಳದ ವಾಹನಗಳೊಂದಿಗೆ ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಘಟನೆಯಲ್ಲಿ ಯಾವುದೇ ರೀತಿಯ ಸಾವು, ನೋವುಗಳು ಸಂಭವಿಸಿರುವುದಾಗಿ ವರದಿಗಳಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಂಕಿ ಅವಘಡಕ್ಕೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಕೆಲ ಸ್ಥಳೀಯರು ಹೇಳುವ ಪ್ರಕಾರ ಸಿಲಿಂಡರ್ ಸ್ಫೋಟದಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com