
ಅಹ್ಮದಾಬಾದ್: ಗುಜರಾತ್ ನಲ್ಲಿರುವ ರಿಲಯನ್ಸ್ ಪೆಟ್ರೋಲ್ ಸಂಸ್ಕರಾಣ ಘಟಕದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.
ರಿಲಯನ್ಸ್ ಪೆಟ್ರೋಲ್ ಸಂಸ್ಕರಣಾ ಘಟಕ ಗುಜರಾತ್ ಜಾಮ್ ನಗರದಲ್ಲಿದ್ದು, ವಿಚಾರ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ದುರಂತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ, ಎಫ್ ಸಿಸಿಯು (fluid catalytic cracking unit) ಘಟಕದಲ್ಲಿ ಗುರುವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಗ್ಯಾಸ್ ಲೈನ್ ಗೂ ಬೆಂಕಿ ತಗುಲಿದೆ. ಇದೇ ಗ್ಯಾಸ್ ಲೈನ್ ಮೂಲಕ ಪ್ರತಿ ನಿತ್ಯ ಸುಮಾರು 660,000 ಬ್ಯಾರೆಲ್ ತೈಲ ರವಾನೆಯಾಗುತ್ತಿತ್ತು ಎಂದು ತಿಳಿದುಬಂದಿದೆ.
ಇತ್ತೀಚೆಗಷ್ಟೇ ಈ ಗ್ಯಾಸ್ ಲೈನ್ ನಲ್ಲಿ ತಾಂತ್ರಿಕ ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ ಇಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಆದರೆ ಅಷ್ಟರಲ್ಲಾಗಲೇ ದುರಂತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಧ್ಯಮಿ ಮುಖೇಶ್ ಅಂಬಾನಿ ಮಾಲೀಕತ್ವ ಎರಡು ಪೆಟ್ರೋಲ್ ಸಂಸ್ಕರಣಾ ಘಟಕಗಳು ಜಾಮ್ ನಗರದಲ್ಲಿದ್ದು, ಎರಡನೇ ಸಂಸ್ಕರಣಾ ಘಟಕದಲ್ಲಿ ಪ್ರತಿನಿತ್ಯ 540,000 ಬ್ಯಾರೆಲ್ ತೈಲವನ್ನು ಉತ್ಪಾದನೆ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ.
Advertisement