ನವದೆಹಲಿ: 500 ಹಾಗೂ 1000 ರುಪಾಯಿ ನೋಟ್ ನಿಷೇಧದಿಂದಾಗಿ ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿ, ಜಿಡಿಪಿ ದರ ಶೇ 2ರಷ್ಟು ಕುಸಿಯಲಿದೆ ಎಂದಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೇಳಿಕೆಯನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಗುರುವಾರ ಸ್ಪಷ್ಟವಾಗಿ ತಳ್ಳಿಹಾಕಿದ್ದು, ಅವರ ಅವಧಿಯಲ್ಲೇ ಅತಿ ಹೆಚ್ಚು ಕಪ್ಪು ಹಣ ಸಂಗ್ರಹವಾಗಿದೆ ಎಂದು ತಿರುಗೇಟು ನೀಡಿದ್ದಾರೆ.