ಜಮ್ಮು-ಕಾಶ್ಮೀರದಲ್ಲಿ ಎನ್'ಕೌಂಟರ್: ಇಬ್ಬರು ಉಗ್ರರ ಹತ್ಯೆ, ಓರ್ವ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಬಂಡೀಪುರ ಜಿಲ್ಲೆಯಲ್ಲಿ ಭಾರತೀಯ ಸೇನಾ ಪಡೆ ಎನ್ ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬಂಡೀಪುರ ಜಿಲ್ಲೆಯಲ್ಲಿ ಭಾರತೀಯ ಸೇನಾ ಪಡೆ ಎನ್ ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.
 
ಸೊಪೊರ್ ಹಾಗೂ ಬಂಡೀಪುರ ಜಿಲ್ಲೆಯಲ್ಲಿ ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಸೇನಾ ಪಡೆ ಹಾಗೂ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆಗಿಳಿದಿದ್ದರು. ಈ ವೇಳೆ ಯೋಧರು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿಗಳು ನಡೆದಿವೆ.

ನಂತರ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ ಸೇನಾ ಪಡೆ, ಉಗ್ರರನ್ನು ಸದೆಬಡಿಯಲು ಮುಂದಾಗಿತ್ತು. ಇದರಂತೆ ಇಂದು ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ. ಯೋಧರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಪಾಕಿಸ್ತಾನ ಸೇನೆ ಮೂವರು ಭಾರತೀಯ ಯೋಧರನ್ನು ಹತ್ಯೆ ಮಾಡಿತ್ತು. ಓರ್ವ ಯೋಧನ ಶಿರಚ್ಚೇದ ಮಾಡುವ ಮೂಲಕ ತನ್ನ ವಿಕೃತ ರೂಪವನ್ನು ಮತ್ತೆ ಪ್ರದರ್ಶಿಸಿತ್ತು. ಇದಲ್ಲದೆ, ಗಡಿಯಲ್ಲಿ ಪ್ರಚೋದಿತ ಗುಂಡಿನ ದಾಳಿ ನಡೆಸಿ ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿತ್ತು. ಈ ಹಿನ್ನೆಲೆಯಲ್ಲಿ ಭಾರತೀಯ ಸೇನೆ ಪಾಕಿಸ್ತಾನದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗಿತ್ತು. ಅಂತರಾಷ್ಟ್ರೀಯ ಗಡಿಯಲ್ಲಿರುವ ಪಾಕಿಸ್ತಾನ ಸೇನಾ ಕೇಂದ್ರಗಳ ಮೇಲೆ ಶೆಲ್ ಗಳ ದಾಳಿ ನಡೆಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com