ಕಾಶ್ಮೀರದಲ್ಲಿ ಉಗ್ರರ ದಾಳಿ: ಇಬ್ಬರು ಪೊಲೀಸರು ಹುತಾತ್ಮ

ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗಸ್ತು ಪಡೆಗಳ ಮೇಲೆ ಉಗ್ರರ ಗುಂಪೊಂದು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಇಬ್ಬರು ಪೊಲೀಸ್ ಸಿಬ್ಬಂದಿಗಳು ಶುಕ್ರವಾರ ಹುತಾತ್ಮರಾಗಿದ್ದಾರೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗಸ್ತು ಪಡೆಗಳ ಮೇಲೆ ಉಗ್ರರ ಗುಂಪೊಂದು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಇಬ್ಬರು ಪೊಲೀಸ್ ಸಿಬ್ಬಂದಿಗಳು ಶುಕ್ರವಾರ ಹುತಾತ್ಮರಾಗಿದ್ದಾರೆ.

ಕುಲ್ಗಾಮ್ ಟೌನ್ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಗಸ್ತು ಪಡೆಗಳ ಮೇಲೆ ಇಂದು ಮಧ್ಯಾಹ್ನ ಉಗ್ರರು ದಾಳಿ ಮಾಡಿದ್ದು, ಪರಿಣಾಮ ಇಬ್ಬರು ಪೊಲೀಸ್ ಸಿಬ್ಬಂದಿಗಳು ಹುತಾತ್ಮರಾಗಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತನ್ವೀರ್ ಅಹ್ಮದ್ ಮತ್ತು ಜುಲಾಲುದ್ದೀನ್ ಅಹ್ಮದ್ ಹುತಾತ್ಮರಾದ ಪೊಲೀಸ್ ಸಿಬ್ಬಂದಿಗಳೆಂದು ಗುರ್ತಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com