ಕಿಸ್ತ್ವಾರ್ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ನ್ಯಾಷನಲ್ ಕಾನ್ಫರೆನ್ಸ್ ನ ಅಧ್ಯಕ್ಷ ಭಾರತ ಹಾಗೂ ಪಾಕಿಸ್ತಾನ ಮಾತುಕತೆ ಮೂಲಕ ಕಾಶ್ಮೀರ ವಿವಾದವನ್ನು ಬಗೆಹರಿಸಿಕೊಳ್ಳಬೇಕು ಯುದ್ಧ ಸಮಸ್ಯೆಗೆ ಪರಿಹಾರವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಕಾಶ್ಮೀರ ವಿವಾದಲ್ಲಿ ಪಾಕಿಸ್ತಾನವನ್ನು ಸಂಬಂಧಿಸಿದ ರಾಷ್ಟ್ರ ಎಂದು ಸ್ವತಃ ಭಾರತ ಸರ್ಕಾರವೇ ಒಪ್ಪಿಕೊಂಡಿದೆ ಅಷ್ಟೇ ಅಲ್ಲದೇ ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಭಾಗವೆಂಬ ನಿರ್ಣಯ ಸಹ ಇದೆ, ಇದೇನು ಇವರ ಪಿತ್ರಾರ್ಜಿತ ಆಸ್ತಿಯೇ ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.