ಲೋಕಸಭೆ (ಸಂಗ್ರಹ ಚಿತ್ರ)
ದೇಶ
ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಗೆ ಜಿಗಿಯಲು ಯತ್ನಿಸಿದ ಅನಾಮಿಕ
ವಿಪಕ್ಷ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುವ ವೇಳೆ ಗ್ಯಾಲರಿಯಲ್ಲಿ ಕುಳಿತಿದ್ದ ವ್ಯಕ್ತಿ ಇದ್ದಕ್ಕಿದ್ದಂತೆ, ಮೇಲಿಂದ ಸದನದೊಳಗೆ ಜಿಗಿಯಲು ಯತ್ನಿಸಿದ್ದಾನೆ....
ನವದೆಹಲಿ: ನೋಟು ನಿಷೇಧದ ಬಗ್ಗೆ ಲೋಕಸಭೆಯಲ್ಲಿ ಗದ್ದಲ ಏರ್ಪಟ್ಟು ಸ್ಪೀಕರ್ ಸುಮಿತ್ರಾ ಮಹಾಜನ್ ಸದನವನ್ನು 40 ನಿಮಿಷಗಳ ಕಾಲ ಮುಂದೂಡಿದರು. ಈ ವೇಳೆ ಸಂದರ್ಶಕರ ಗ್ಯಾಲರಿಯಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ಲೋಕಸಭೆಗೆ ಹಾರಲು ಪ್ರಯತ್ನಿಸಿದ್ದಾನೆ.
ವಿಪಕ್ಷ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುವ ವೇಳೆ ಗ್ಯಾಲರಿಯಲ್ಲಿ ಕುಳಿತಿದ್ದ ವ್ಯಕ್ತಿ ಇದ್ದಕ್ಕಿದ್ದಂತೆ, ಮೇಲಿಂದ ಸದನದೊಳಗೆ ಜಿಗಿಯಲು ಯತ್ನಿಸಿದ್ದಾನೆ. ಕೂಡಲೇ ಇದನ್ನು ನೋಡಿದ ಭದ್ರತಾ ಸಿಬ್ಬಂದಿ ಆತನನ್ನು ಹಿಡಿದು ಕರೆತಂದಿದ್ದಾರೆ.
ಸದನದೊಳಗೆ ಜಿಗಿಯಲು ಯತ್ನಿಸಿದ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಇಂಥಹ ಘಟನೆಗಳನ್ನು ತಡೆಯಲು ಸಂದರ್ಶಕರ ಗ್ಯಾಲರಿಯ ಮೊದಲ ಸಾಲಿನಲ್ಲಿ ದೆಹಲಿ ಪೊಲೀಸರು ಕುಳಿತಿರುತ್ತಾರೆ. ಸದನ ಮುಂದೂಡಿ ಸ್ಪೀಕರ್ ಸುಮಿತ್ರಾ ಮಹಾಜನ್ ಹೊರ ನಡೆದಿದ್ದರು. ಹಣಕಾಸು ಸಚಿವ ಅರುಣ್ ಜೇಟ್ಲಿ ಮತ್ತಿತರ ಹಿರಿಯ ಸಚಿವರು ಘಟನೆ ನಡೆದಾಗ ಲೋಕಸಭೆಯಲ್ಲಿ ಉಪಸ್ಥಿತರಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ