ಫಿಡೆಲ್ ಕ್ಯಾಸ್ಟ್ರೋ ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಕ್ಯಾಸ್ಟ್ರೋ 20 ನೇ ಶತಮಾನದ ಅಗ್ರಗಣ್ಯ ನಾಯಕರಲ್ಲಿ ಒಬ್ಬರಾಗಿದ್ದರು, ಶ್ರೇಷ್ಠ ಸ್ನೇಹಿತನ ಸಾವಿಗೆ ಭಾರತ ದುಃಖಗೊಂಡಿದೆ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸಹ ಫಿಡೆಲ್ ಕ್ಯಾಸ್ಟ್ರೋ ನಿಧನಕ್ಕೆ ಸಂತಾಪ ಸೂಚಿಸಿದ್ದು, ಕ್ರಾಂತಿಕಾರಿ ನಾಯಕರಾಗಿದ್ದ ಕ್ಯಾಸ್ಟ್ರೋ ಅಲಿಪ್ತ ಚಳವಳಿಗೆ ನೀಡಿದ ಕೊಡುಗೆಗಾಗಿ ಅವಿಸ್ಮರಣೀಯರಾಗಿ ಉಳಿಯುತ್ತಾರೆ. ಅಷ್ಟೇ ಅಲ್ಲದೇ ವಿವಿಧ ವೇದಿಕೆಗಳಲ್ಲಿ ಕ್ಯಾಸ್ಟ್ರೋ ಭಾರತಕ್ಕೆ ನೀಡಿದ ಬೆಂಬಲವನ್ನು ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.