ಸಂಸತ್ ಅಧಿವೇಶನಕ್ಕೆ ಅಪರೂಪಕ್ಕೆ ಆಗಮಿಸುವ ರಾಹುಲ್ ಗಾಂಧಿ ಸಂಸತ್ ನ ಹೊರಗೂ ಉತ್ತಮ ಕೆಲಸಗಳನ್ನು ಮಾಡುತ್ತಿಲ್ಲ. ಆದ್ದರಿಂದ ಅವರು ಪ್ರಧಾನಿ ಮೋದಿ ಅವರ ಅನುಪಸ್ಥಿತಿಯನ್ನು ಪ್ರಶ್ನಿಸಲು ಅರ್ಹರಲ್ಲ, ರಾಹುಲ್ ಗಾಂಧಿ ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸುವುದು ಹಾಸ್ಯಾಸ್ಪದ ಎಂದು ಬಿಜೆಪಿ ನಾಯಕ ಜಿವಿಎಲ್ ನರಸಿಂಹರಾವ್ ಹೇಳಿದ್ದಾರೆ.