ನಿತೀಶ್ ಕುಮಾರ್
ನಿತೀಶ್ ಕುಮಾರ್

ನೋಟು ನಿಷೇಧದ ವಿರುದ್ಧದ ಪ್ರತಿಪಕ್ಷಗಳ ಭಾರತ್ ಬಂದ್ ಗೆ ಜೆಡಿಯು ವಿರೋಧ!

ನ.28 ರಂದು ನಡೆಸುತ್ತಿರುವ ಭಾರತ್ ಬಂದ್ ಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ವಿರೋಧ ವ್ಯಕ್ತಪಡಿಸಿದ್ದು ಭಾರತ್ ಬಂದ್ ಗೆ ಬೆಂಬಲ ನೀಡುವುದಿಲ್ಲ ಎಂದು ಘೋಷಿಸಿದೆ.
ಪಾಟ್ನಾ: 500, 1000 ರೂ ನೋಟುಗಳನ್ನು ನಿಷೇಧಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಆಮ್ ಆದ್ಮಿ ಪಕ್ಷ ಸೇರಿದಂತೆ ಪ್ರತಿಪಕ್ಷಗಳ ಒಕ್ಕೂಟ ನ.28 ರಂದು ನಡೆಸುತ್ತಿರುವ ಭಾರತ್ ಬಂದ್ ಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ವಿರೋಧ ವ್ಯಕ್ತಪಡಿಸಿದ್ದು ಭಾರತ್ ಬಂದ್ ಗೆ ಬೆಂಬಲ ನೀಡುವುದಿಲ್ಲ ಎಂದು ಘೋಷಿಸಿದೆ. 
ಭಾರತ್ ಬಂದ್ ಗೆ ಬೆಂಬಲ ನೀಡುವುದಿಲ್ಲ ಎಂಬ ಅಂಶವನ್ನು ಜೆಡಿಯು ನಾಯಕ ಹಾಗೂ ಬಿಹಾರ ಸಿಎಂ ನಿತೀಶ್ ಕುಮಾರ್ ಈಗಾಗಲೇ ಕಾಂಗ್ರೆಸ್ ಹಾಗೂ ಆರ್ ಜೆಡಿ ಗೆ ತಿಳಿಸಿದ್ದಾರೆ. " ನೋಟು ನಿಷೇಧದ ನಿರ್ಧಾರ ಘೋಷಣೆಯಾದ   ಮೊದಲನೇ ದಿನದಿಂದಲೂ ಜೆಡಿಯು ರಾಷ್ಟ್ರಾಧ್ಯಕ್ಷ ನಿತೀಶ್ ಕುಮಾರ್ ಕೇಂದ್ರ ಸರ್ಕಾರದ ನಿರ್ಧಾರವನ್ನು ಬೆಂಬಲಿಸುತ್ತಿದ್ದಾರೆ. ಕೇಂದ್ರ ಸರ್ಕಾರ ತನ್ನ ನೀತಿಯನ್ನು ಜಾರಿಗೊಳಿಸುವಲ್ಲಿ ಕೆಲವು ಲೋಪಗಳು ಉಂಟಾಗಿದೆ ಎಂದೂ ನಿತೀಶ್ ಕುಮಾರ್ ಹೇಳಿದ್ದಾರೆ. ಆದರೆ ನೋಟು ನಿಷೇಧದ ನಿರ್ಧಾರವನ್ನು ಎಂದೂ ವಿರೋಧಿಸಿಲ್ಲ, ಆದ್ದರಿಂದ ವಿಪಕ್ಷಗಳ ಒಕ್ಕೂಟ ನ.28 ರಂದು ಕರೆ ನೀಡಿರುವ ಭಾರತ್ ಬಂದ್ ಗೆ  ಜೆಡಿಯು ಬೆಂಬಲ ನೀಡುವುದಿಲ್ಲ ಎಂದು ಜೆಡಿಯು ನಾಯಕ ಕೆಸಿ ತ್ಯಾಗಿ ಹೇಳಿದ್ದಾರೆ. 

Related Stories

No stories found.

Advertisement

X
Kannada Prabha
www.kannadaprabha.com