

ನವದೆಹಲಿ: ಸಂಸತ್ತು ಕಲಾಪದಲ್ಲಿ ನೋಟು ನಿಷೇಧ ಕುರಿತಂತೆ ತೀವ್ರ ಗದ್ದಲ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಿರಿಯ ಸಚಿವರೊಂದಿಗೆ ಸಭೆ ಸೋಮವಾರ ಸಭೆ ನಡೆಸಲಿದ್ದಾರೆ.
ನೋಟು ನಿಷೇಧ ಕುರಿತಂತೆ ಈಗಾಗಲೇ ಸಂಸತ್ತಿನ ಎದುರು ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದು, ವಿರೋಧ ಪಕ್ಷಗಳ ಗದ್ದಲಕ್ಕೆ ಕಡಿವಾಣ ಹಾಕುವ ಸಲುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಿರಿಯ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆಂದು ಹೇಳಲಾಗುತ್ತಿದೆ.
ಸಂಸತ್ತಿನಲ್ಲಿ ಚಳಿಗಾಲ ಅಧಿವೇಶನ ಆರಂಭವಾಗಿ ಹಲವು ದಿನಗಳ ಕಳೆದರೂ, ನೋಟು ನಿಷೇಧ ಕುರಿತಂತೆ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆಗಳನ್ನು ನಡೆಸಿ ಕಪಾಲಕ್ಕೆ ಅಡ್ಡಿಯುಂಟು ಮಾಡುತ್ತಿವೆ. ಕಳೆದ ಶುಕ್ರವಾರ ಕೂಡ ವಿರೋಧ ಪಕ್ಷಗಳು ತೀವ್ರ ಗದ್ದಲವುಂಟು ಮಾಡಿದ್ದ ಹಿನ್ನೆಲೆಯಲ್ಲಿ ಕಲಾಪವನ್ನು ಇಂದಿಗೆ ಮುಂದೂಡಲಾಗಿತ್ತು.