
ನವದೆಹಲಿ: ಉತ್ತರ ಕಾಶ್ಮೀರದ ಹಂದ್ವಾರದಲ್ಲಿರು ಲಾನ್ಗೇಟ್ ಟೌನ್ ಮೇಲೆ ಉಗ್ರರು ದಾಳಿ ನಡೆಸಿದ್ದು, ಉಗ್ರರ ಸದೆಬಡಿಯಲು ಸೇನೆ ಕಾರ್ಯಾಚರಣೆಯನ್ನು ಆರಂಭಿಸಿದೆ ಎಂದು ಸೋಮವಾರ ತಿಳಿದುಬಂದಿದೆ.
ಇಂದು ಬೆಳಗಿನ ಜಾವ ಉಗ್ರರು ದಾಳಿ ನಡೆಸಿದ್ದು, ಅಡಗಿ ಕುಳಿತುಗೊಂಡು ಭಾರತೀಯ ಸೇನೆಯನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಉಗ್ರರಿಗಾಗಿ ಸೇನಾ ಪಡೆ ಕಾರ್ಯಾಚರಣೆ ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ.
ಸ್ಥಳದಲ್ಲಿ ಉಗ್ರರು ಹಾಗೂ ಯೋಧರ ನಡುವೆ ಭಾರೀ ಗುಂಡಿನ ಚಕಮಕಿಗಳು ನಡೆಯುತ್ತಿದ್ದು, ಸಾವು-ನೋವುಗಳ ಕುರಿತಂತೆ ಈ ವರೆಗೂ ಯಾವುದೇ ವರದಿಗಳಾಗಿಲ್ಲ.
Advertisement