ಜಮ್ಮು ಕಾಶ್ಮೀರ: ನಗ್ರೋಟಾ ಸೇನಾ ತುಕಡಿ ಮೇಲೆ ಆತ್ಮಹತ್ಯಾ ದಾಳಿ, ಇಬ್ಬರು ಯೋಧರು ಹುತಾತ್ಮ

ಜಮ್ಮು ಕಾಶ್ಮೀರದ ನಗ್ರೋಟಾ ಸೇನಾ ತುಕಡಿ ಮೇಲೆ ಉಗ್ರರು ಆತ್ಮಹತ್ಯಾ ದಾಳಿ ನಡೆಸಿದ ಪರಿಣಾಮ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಜಮ್ಮು:  ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದೆ. ಜಮ್ಮು ಕಾಶ್ಮೀರದ ನಗ್ರೋಟಾ ಸೇನಾ ತುಕಡಿ ಮೇಲೆ ಉಗ್ರರು ಆತ್ಮಹತ್ಯಾ ದಾಳಿ ನಡೆಸಿದ ಪರಿಣಾಮ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

ಜಮ್ಮು ಕಾಶ್ಮೀರದಿಂದ ಸುಮಾರು 20 ಕಿಮೀ ದೂರದಲ್ಲಿರುವ ನಗ್ರೋಟಾ ಸೇನಾ ನೆಲೆಯ 166 ಫೀಲ್ಡ್ ರೆಜಿಮೆಂಟ್ ಮೇಲೆ ಸುಮಾರು 4ರಿಂದ 5 ಮಂದಿಯಿರುವ ಉಗ್ರರ ತಂಡ ಮಂಗಳವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಉಗ್ರರು ಸೇನಾ ಕ್ಯಾಂಪಸ್ ಮೇಲೆ ಗ್ರೆನೇಡ್ ಜಾಳಿ ನಡೆಸಿದ್ದಾರೆ. ಇದಕ್ಕೆ ಭಾರತ ಸೇನೆ ಕೂಡ ಪ್ರತ್ಯುತ್ತರ ನೀಡಿದೆ. ಸಾವಿನ ಸಂಖ್ಯೆ ಮತ್ತಷ್ಟು  ಏರಿಕೆಯಾಗುವ ಸಾಧ್ಯತೆಯಿದೆ.

ಮತ್ತೊಂದು ಪ್ರಕರಣದಲ್ಲಿ ಗಡಿ ಭದ್ರತಾ ಪಡೆ ಯೋಧರ ಮೇಲೆ ಸಾಂಬಾ ಪ್ರದೇಶದಲ್ಲಿ ಉಗ್ರರು ದಾಳಿ ನಡೆಸಿದ್ದಾರೆ. ಕಳೆದ ಕೆಲ ದಿನಗಳಿಂದ ಗಡಿಯಲ್ಲಿ ಉಗ್ರ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತವೇ ಬಂದಿವೆ.

ಸೇನೆ 16ರ ಪ್ರಧಾನ ಕಚೇರಿ ಸಮೀಪ ಅಂದರೆ ಗ್ಯಾರಿಸನ್ ಪಟ್ಟಣದಲ್ಲಿ ಫೀಲ್ಡ್ ರಿಜಿಮೆಂಟ್ ಇದೆ. ಇಲ್ಲಿಯೇ ಉಗ್ರರು ಮತ್ತು ಭದ್ರತಾ ಪಡೆ ನಡುವೆ ಗುಂಡಿನ ಚಕಮಕಿ ಮುಂದುವರಿದಿದೆ. ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳಿಸಿದ್ದು ಎಲ್ಲಾ ಶಾಲೆ ಕಾಲೇಜುಗಳನ್ನು ಮುಚ್ಚಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com