ವಿಪಕ್ಷಗಳ ಟೀಕೆಗಳಿಗೆ ದೇಶವೇ ಸರಿಯಾದ ಉತ್ತರವನ್ನು ನೀಡುತ್ತಿದೆ: ರವಿ ಶಂಕರ್ ಪ್ರಸಾದ್

ಬಡವರ ಪರ ಸರ್ಕಾರದ ವಿರುದ್ದ ಶಂಕೆಗಳನ್ನು ವ್ಯಕ್ತಪಡಿಸುತ್ತಿದ್ದ ವಿರೋಧ ಪಕ್ಷಗಳಿಗೆ ದೇಶದ ಜನತೆಯೇ ಸರಿಯಾದ ಉತ್ತರಗಳನ್ನು ನೀಡುತ್ತಿದೆ ಎಂದು ಕೇಂದ್ರ ನಾನು ಮತ್ತು ಮಾಹಿತಿ ಸಚಿವ ರವಿ ಶಂಕರ್ ಪ್ರಸಾದ್ ಅವರು ಮಂಗಳವಾರ ಹೇಳಿದ್ದಾರೆ...
ಕೇಂದ್ರ ಕಾನೂನು ಮತ್ತು ಮಾಹಿತಿ ಸಚಿವ ರವಿ ಶಂಕರ್ ಪ್ರಸಾದ್
ಕೇಂದ್ರ ಕಾನೂನು ಮತ್ತು ಮಾಹಿತಿ ಸಚಿವ ರವಿ ಶಂಕರ್ ಪ್ರಸಾದ್
Updated on

ನವದೆಹಲಿ: ಬಡವರ ಪರ ಸರ್ಕಾರದ ವಿರುದ್ದ ಶಂಕೆಗಳನ್ನು ವ್ಯಕ್ತಪಡಿಸುತ್ತಿದ್ದ ವಿರೋಧ ಪಕ್ಷಗಳಿಗೆ ದೇಶದ ಜನತೆಯೇ ಸರಿಯಾದ ಉತ್ತರಗಳನ್ನು ನೀಡುತ್ತಿದೆ ಎಂದು ಕೇಂದ್ರ ಕಾನೂನು ಮತ್ತು ಮಾಹಿತಿ ಸಚಿವ ರವಿ ಶಂಕರ್ ಪ್ರಸಾದ್ ಅವರು ಮಂಗಳವಾರ ಹೇಳಿದ್ದಾರೆ.

ನೋಟು ನಿಷೇಧ ಕುರಿತಂತೆ ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ, ವಾಗ್ದಾಳಿ ನಡೆಸುತ್ತಿರುವ ವಿರೋಧ ಪಕ್ಷಗಳ ಬಾಯಿ ಮುಚ್ಚಿಸುವ ಸಲುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕ್ರಮವೊಂದನ್ನು ಕೈಗೊಂಡಿದ್ದು, ಜ.1ರ ಒಳಗಾಗಿ ನ.8 ರಿಂದ ಡಿ.31ರ ಒಳಗಿನ ಬ್ಯಾಂಕ್ ವಹಿವಾಟಿನ ಎಲ್ಲಾ ವಿವರಗಳನ್ನು ಸಲ್ಲಿಸುವಂತೆ ಎಲ್ಲಾ ಬಿಜೆಪಿ ಸಂಸದರು, ಶಾಸಕರು ಹಾಗೂ ನಾಯಕರಿಗೆ ಸೂಚನೆಯನ್ನು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ರವಿ ಶಂಕರ್ ಪ್ರಸಾದ್ ಅವರು, ದೇಶದಲ್ಲಿ ಬದಲಾವಣೆಯನ್ನು ತರಲು ಹಾಗೂ ಅಭಿವೃದ್ಧಿ ಪಥದತ್ತ ಸಾಗಿಸುವ ಸಲುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಾವೇ ಅಧಿಕಾರಕ್ಕೆ ಬಂದರು. ವಿರೋಧ ಪಕ್ಷಗಳ ಕುರಿತಂತೆ ಜನರು ನೀಡುತ್ತಿರುವ ಪ್ರತಿಕ್ರಿಯೆ ಕುರಿತಂತೆ ಯಾವುದೇ ರೀತಿಯ ಹೇಳಿಕೆಯನ್ನು ನಾನು ನೀಡುವುದಿಲ್ಲ. ಮೋದಿ ಸರ್ಕಾರದ ವಿರುದ್ಧ ಟೀಕೆಗಳನ್ನು ವ್ಯಕ್ತಪಡಿಸುತ್ತಿರುವ ವಿರೋಧ ಪಕ್ಷಗಳಿಗೆ ಜನತೆಯೇ ಸರಿಯಾದ ಉತ್ತರವನ್ನು ನೀಡುತ್ತಿದ್ದಾರೆಂದು ಹೇಳಿದ್ದಾರೆ.

ಮಧ್ಯಪ್ರದೇಶ ಹಾಗೂ ಅಸ್ಸಾಂನಲ್ಲಿ ಗೆಲವು ಸಾಧಿಸಿದ್ದೇವೆ. ತ್ರಿಪುರದಲ್ಲಿ ನಮ್ಮ ಶೇಕಡಾವಾರು ಮತಗಳ ಸಂಖ್ಯೆ ಹೆಚ್ಚಾಗಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಉತ್ತಮವಾಗಿ ಕೆಲಸ ಮಾಡುತ್ತಿದೆ. ಪ್ರಸ್ತುತ ನಾವು ಕೆಲಸವನ್ನು ಮಾಡುತ್ತಿದ್ದು, ದೇಶಕ್ಕಾಗಿ ನಮ್ಮ ಕೆಲಸವನ್ನು ಮುಂದುವರೆಸುತ್ತೇವೆ. ಬಡವರ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಮುಡಿಪಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com