ಪಠಾಣ್'ಕೋಟ್ ದಾಳಿ: ಮಸೂದ್ ಅಜರ್ ವಿರುದ್ಧ ಚಾರ್ಜ್'ಶೀಟ್ ಸಲ್ಲಿಸಲು ಗ್ರೀನ್ ಸಿಗ್ನಲ್

ಪಠಾಣ್ ಕೋಟ್ ವಾಯುನೆಲೆ ಮೇಲೆ ಉಗ್ರರು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮೌಲಾನ ಮಸೂದ್ ಅಜರ್ ಸೇರಿದಂತೆ ನಾಲ್ವರ ವಿರುದ್ಧ ಚಾರ್ಚ್ ಶೀಟ್ ಸಲ್ಲಿಸಲು ಕೇಂದ್ರ ಗೃಹ ಸಚಿವಾಲಯ...
ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮೌಲಾನ ಮಸೂದ್ ಅಜರ್
ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮೌಲಾನ ಮಸೂದ್ ಅಜರ್

ನವದೆಹಲಿ: ಪಠಾಣ್ ಕೋಟ್ ವಾಯುನೆಲೆ ಮೇಲೆ ಉಗ್ರರು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮೌಲಾನ ಮಸೂದ್ ಅಜರ್ ಸೇರಿದಂತೆ ನಾಲ್ವರ ವಿರುದ್ಧ ಚಾರ್ಚ್ ಶೀಟ್ ಸಲ್ಲಿಸಲು ಕೇಂದ್ರ ಗೃಹ ಸಚಿವಾಲಯ ಸೋಮವಾರ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳಿಗೆ ಗ್ರೀನ್ ಸಿಗ್ನಲ್ ನೀಡಿದೆ.

ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ 18, 20 ಮತ್ತು 28ನೇ ಅಡಿಯಲ್ಲಿ ಶಸ್ತ್ರಾಸ್ತ್ರ ಕಾಯ್ದೆ ಸೇರಿದಂತೆ ಹಲವು ಕಾಯ್ದೆಗಳ ಅಡಿಯಲ್ಲಿ ಮಸೂದ್ ಅಜರ್ ಹಾಗೂ ಆತನ ಸಹೋದರ ಅಬ್ದುಲ್ ರೌಫ್ ಮತ್ತು ದಾಳಿಯಲ್ಲಿ ಪ್ರಮುಖರಾಗಿದ್ದ ಶೀಹೀದ್ ಲತೀಫ್, ಕಾಸಿಫ್ ಜಾನ್ ವಿರುದ್ಧ ಜಾರ್ಜ್ ಶೀಟ್ ಸಲ್ಲಿಸಲು ಅನಮತಿ ನೀಡಲಾಗಿದೆ ಎಂದು ತಿಳಿದುಬಂದಿದೆ.

ಈ ಹಿಂದೆ ರಾಷ್ಟ್ರೀಯ ತನಿಖಾ ದಳ ಮಸೂದ್ ಅಜರ್ ಮತ್ತು ಇತರ ಮೂವರ ವಿರುದ್ಧ ಜಾರ್ಜ್ ಶೀಟ್ ಸಲ್ಲಿಸಲು ಅನುಮತಿ ನೀಡುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರವೊಂದನ್ನು ಬರೆದಿತ್ತು. ಇದೀಗ ಗೃಹ ಸಚಿವಾಲಯ ಚಾರ್ಜ್ ಶೀಟ್ ಸಲ್ಲಿಕೆಗೆ ಅನುಮತಿ ನೀಡಿದ್ದು, ಎನ್ ಐಎ ಅಧಿಕಾರಿಗಳು ನಾಲ್ವರ ವಿರುದ್ಧ ಶೀಘ್ರದಲ್ಲಿಯೇ ಚಾರ್ಜ್ ಶೀಲ್ ಸಲ್ಲಿಸಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಜನವರಿ 2 ರಂದು ಪಠಾಣ್ ಕೋಟ್ ವಾಯುನೆಲೆಯ ಮೇಲೂ ನಾಲ್ವರು ಉಗ್ರರ ಗುಂಪೊಂದು ದಾಳಿ ನಡೆಸಿತ್ತು. ದಾಳಿ ವೇಳೆ 7 ಯೋಧರು ಹುತಾತ್ಮರಾಗಿದ್ದರು. ಭದ್ರತಾ ಪಡೆಗಳು ಸತತ 80 ಗಂಟೆಗಳ ಕಾಲ ಕಾರ್ಯಾಚರಣೆಯನ್ನು ನಡೆಸಿ ಎಲ್ಲಾ ಉಗ್ರರನ್ನು ಸದೆಬಡಿದಿತ್ತು.

ಪ್ರಕರಣ ಸಂಬಂಧ ಮಸೂದ್ ಅಜರ್, ಅಬ್ದುಲ್ ರೌಫ್, ಶಾಹೀದ್ ಲತೀಫ್ ಮತ್ತು ಕಾಸಿಫ್ ಜಾನ್ ವಿರುದ್ಧ ಇಂಟರ್ಪೋಲ್ ಈಗಾಗಲೇ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿದೆ. ಆದರೆ, ಪಾಕಿಸ್ತಾನ ಮಾತ್ರ ಈ ಉಗ್ರರ ವಿರುದ್ಧ ಈ ವರೆಗೂ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ.

ಮಸೂದ್ ಅಜರ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಗೆ ಗೃಹ ಸಚಿವಾಲಯ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಅಧಿಕಾರಿಗಳು ಮಸೂದ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದ್ದಾರೆ, ಚಾರ್ಜ್ ಶೀಟ್ ಸಲ್ಲಿಸಿದ ಬಳಿಕ ಆತನ ವಿರುದ್ಧ ವಿಶ್ವಸಂಸ್ಥೆಯಲ್ಲಿ ವಾದ ಮಂಡಿಸಲು ಭಾರತಕ್ಕೆ ಮತ್ತಷ್ಟು ಬಲಬಂದಂತಾಗುತ್ತದೆ. ಭಾರತ ಮಸೂದ್ ಅಜರ್ ನನ್ನು ಅಂತರಾಷ್ಟ್ರೀಯ ಭಯೋತ್ಪಾದಕನೆಂದು ಘೋಷಿಸಬೇಕೆಂದು ವಿಶ್ವಸಂಸ್ಥೆಯಲ್ಲಿ ವಾದ ಮಂಡಿಸುತ್ತಿದೆ. ಆದರೆ, ಭಾರತ ಈ ವಾದಕ್ಕೆ ಚೀನಾ ತನ್ನ ವೀಟೋ ಅಧಿಕಾರ ಬಳಸಿ ಬೆಂಬಲ ಸಿಗದಂತೆ ಮಾಡುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com